ಕೀರ್ತನೆಗಳು 19 : 1 (IRVKN)
ದೇವರ ಸೃಷ್ಟಿ ಮತ್ತು ಧರ್ಮಶಾಸ್ತ್ರದ ಮಹಿಮೆ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. *ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ; ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ.
ಕೀರ್ತನೆಗಳು 19 : 2 (IRVKN)
ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು; ರಾತ್ರಿಯು ರಾತ್ರಿಗೆ ಜ್ಞಾನವನ್ನು ಪ್ರಕಟಿಸುತ್ತಿರುವುದು.
ಕೀರ್ತನೆಗಳು 19 : 3 (IRVKN)
ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವುದಿಲ್ಲ.
ಕೀರ್ತನೆಗಳು 19 : 4 (IRVKN)
ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.
ಕೀರ್ತನೆಗಳು 19 : 5 (IRVKN)
ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು. ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ.
ಕೀರ್ತನೆಗಳು 19 : 6 (IRVKN)
ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
ಕೀರ್ತನೆಗಳು 19 : 7 (IRVKN)
ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.
ಕೀರ್ತನೆಗಳು 19 : 8 (IRVKN)
ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.
ಕೀರ್ತನೆಗಳು 19 : 9 (IRVKN)
ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.
ಕೀರ್ತನೆಗಳು 19 : 10 (IRVKN)
ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.
ಕೀರ್ತನೆಗಳು 19 : 11 (IRVKN)
ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.
ಕೀರ್ತನೆಗಳು 19 : 12 (IRVKN)
ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾರು? ಮರೆಯಾದ ದೋಷಗಳಿಂದ ನನ್ನನ್ನು ನಿರ್ಮಲಮಾಡು.
ಕೀರ್ತನೆಗಳು 19 : 13 (IRVKN)
ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾದ್ರೋಹಕ್ಕೆ ಒಳಗಾಗುವುದಿಲ್ಲ.
ಕೀರ್ತನೆಗಳು 19 : 14 (IRVKN)
ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.
❮
❯
1
2
3
4
5
6
7
8
9
10
11
12
13
14