ಕೀರ್ತನೆಗಳು 21 : 1 (IRVKN)
ಅರಸನ ವಿಜಯದಲ್ಲಿ ಯೆಹೋವನನ್ನು ಸ್ತುತಿಸುವ ಕೀರ್ತನೆ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. *ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.
ಕೀರ್ತನೆಗಳು 21 : 2 (IRVKN)
ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ, ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. QSS ಸೆಲಾ SE
ಕೀರ್ತನೆಗಳು 21 : 3 (IRVKN)
ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ.
ಕೀರ್ತನೆಗಳು 21 : 4 (IRVKN)
ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.
ಕೀರ್ತನೆಗಳು 21 : 5 (IRVKN)
ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು; ಘನತೆ ಮತ್ತು ವೈಭವಗಳನ್ನು ಅವನಿಗೆ ಅನುಗ್ರಹಿಸಿದ್ದೀ.
ಕೀರ್ತನೆಗಳು 21 : 6 (IRVKN)
ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ.
ಕೀರ್ತನೆಗಳು 21 : 7 (IRVKN)
ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಪರಾತ್ಪರನಾದ ದೇವರ ಶಾಶ್ವತ ಪ್ರೀತಿಯ ನಿಮಿತ್ತ ಅವನು ಕದಲುವುದೇ ಇಲ್ಲ.
ಕೀರ್ತನೆಗಳು 21 : 8 (IRVKN)
ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.
ಕೀರ್ತನೆಗಳು 21 : 9 (IRVKN)
ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು.
ಕೀರ್ತನೆಗಳು 21 : 10 (IRVKN)
ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ; ಅವರ ವಂಶದವರು ಮನುಷ್ಯರೊಳಗೆ ಉಳಿಯುವುದೇ ಇಲ್ಲ.
ಕೀರ್ತನೆಗಳು 21 : 11 (IRVKN)
ಅವರು ತಂತ್ರೋಪಾಯಗಳನ್ನು ಕಲ್ಪಿಸಿ, ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ.
ಕೀರ್ತನೆಗಳು 21 : 12 (IRVKN)
ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ, ಅವರ ಮುಖಗಳ ಮೇಲೆ ಎಸೆದು, ಅವರು ಬೆನ್ನುತೋರಿಸಿ ಓಡಿಹೋಗುವಂತೆ ಮಾಡುವಿ.
ಕೀರ್ತನೆಗಳು 21 : 13 (IRVKN)
ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.
❮
❯
1
2
3
4
5
6
7
8
9
10
11
12
13