ಕೀರ್ತನೆಗಳು 22 : 1 (IRVKN)
ಘೋರಬಾಧೆಪಟ್ಟ ಭಕ್ತನ ಮನಃಪೂರ್ವಕ ಪ್ರಾರ್ಥನೆ *(ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಉದಯದ ಜಿಂಕೆ ಎಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ.)
ಕೀರ್ತ 69; 71; 102; ಯೆಶಾ 55 *ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?
ಕೀರ್ತನೆಗಳು 22 : 2 (IRVKN)
ನನ್ನ ದೇವರೇ, ಹಗಲಿನಲ್ಲಿ ಮೊರೆಯಿಡುತ್ತೇನೆ; ಪ್ರತ್ಯುತ್ತರವೇ ಇಲ್ಲ; ರಾತ್ರಿಯಲ್ಲಿಯೂ ನನಗೆ ಉಪಶಮನವಿಲ್ಲ.
ಕೀರ್ತನೆಗಳು 22 : 3 (IRVKN)
ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ, ನೀನು ಪವಿತ್ರಸ್ವರೂಪನು.
ಕೀರ್ತನೆಗಳು 22 : 4 (IRVKN)
ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು.
ಕೀರ್ತನೆಗಳು 22 : 5 (IRVKN)
ನಿನಗೆ ಮೊರೆಯಿಟ್ಟು ವಿಮುಕ್ತರಾದರು; ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ.
ಕೀರ್ತನೆಗಳು 22 : 6 (IRVKN)
ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.
ಕೀರ್ತನೆಗಳು 22 : 7 (IRVKN)
ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ; ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ,
ಕೀರ್ತನೆಗಳು 22 : 8 (IRVKN)
“ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ; ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ” ಎಂದು ಹೇಳುತ್ತಾರೆ.
ಕೀರ್ತನೆಗಳು 22 : 9 (IRVKN)
ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ. ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ.
ಕೀರ್ತನೆಗಳು 22 : 10 (IRVKN)
ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ.
ಕೀರ್ತನೆಗಳು 22 : 11 (IRVKN)
ನನಗೀಗ ಕಷ್ಟವು ಪ್ರಾಪ್ತವಾಗಿದೆ; ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ.
ಕೀರ್ತನೆಗಳು 22 : 12 (IRVKN)
ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.
ಕೀರ್ತನೆಗಳು 22 : 13 (IRVKN)
ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವುದಕ್ಕೆ ಬಾಯಿ ತೆರೆದಿದ್ದಾರೆ.
ಕೀರ್ತನೆಗಳು 22 : 14 (IRVKN)
ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.
ಕೀರ್ತನೆಗಳು 22 : 15 (IRVKN)
* ಅಥವಾ ಗಂಟಲು. ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.
ಕೀರ್ತನೆಗಳು 22 : 16 (IRVKN)
ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.
ಕೀರ್ತನೆಗಳು 22 : 17 (IRVKN)
ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು; ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ.
ಕೀರ್ತನೆಗಳು 22 : 18 (IRVKN)
ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ; ನನ್ನ ಅಂಗಿಗಾಗಿ ಚೀಟುಹಾಕುತ್ತಾರೆ.
ಕೀರ್ತನೆಗಳು 22 : 19 (IRVKN)
ಯೆಹೋವನೇ, ನನ್ನ ರಕ್ಷಕನೇ, ನೀನಾದರೋ ದೂರವಾಗಿರಬೇಡ; ಬೇಗ ಬಂದು ಸಹಾಯಮಾಡು.
ಕೀರ್ತನೆಗಳು 22 : 20 (IRVKN)
ಕತ್ತಿಗೆ ಸಿಕ್ಕದಂತೆ ನನ್ನನ್ನು ತಪ್ಪಿಸು; ನನ್ನ ಪ್ರಿಯ ಪ್ರಾಣವು ನಾಯಿಯ ವಶವಾಗದಂತೆ ಕಾಪಾಡು.
ಕೀರ್ತನೆಗಳು 22 : 21 (IRVKN)
ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು † ಅಥವಾ ನನಗೆ ಸದುತ್ತರವನ್ನು ಕೊಟ್ಟಿದ್ದೀಯಲ್ಲಾ. ತಪ್ಪಿಸು.
ಕೀರ್ತನೆಗಳು 22 : 22 (IRVKN)
ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
ಕೀರ್ತನೆಗಳು 22 : 23 (IRVKN)
ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ.
ಕೀರ್ತನೆಗಳು 22 : 24 (IRVKN)
ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, ಅದಕ್ಕೆ ಅಸಹ್ಯಪಡಲಿಲ್ಲ; ತನ್ನ ಮುಖವನ್ನು ಅವನಿಗೆ ಮರೆಮಾಡದೆ, ಅವನ ಪ್ರಾರ್ಥನೆಗೆ ಕಿವಿಗೊಟ್ಟನು.
ಕೀರ್ತನೆಗಳು 22 : 25 (IRVKN)
ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.
ಕೀರ್ತನೆಗಳು 22 : 26 (IRVKN)
ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ‡ ಅಥವಾ ನಿಮ್ಮ. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.
ಕೀರ್ತನೆಗಳು 22 : 27 (IRVKN)
ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು § ಅಥವಾ ಆತನಿಗೆ. ನಿನಗೆ ಅಡ್ಡಬೀಳುವರು.
ಕೀರ್ತನೆಗಳು 22 : 28 (IRVKN)
ರಾಜ್ಯವು ಯೆಹೋವನದೇ; ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು.
ಕೀರ್ತನೆಗಳು 22 : 29 (IRVKN)
ಭೂಲೋಕದಲ್ಲಿರುವ ಪುಷ್ಟರೆಲ್ಲರೂ * ಅಥವಾ ಉಂಡು ಆರಾಧಿಸುವರು. ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.
ಕೀರ್ತನೆಗಳು 22 : 30 (IRVKN)
ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡವರು.
ಕೀರ್ತನೆಗಳು 22 : 31 (IRVKN)
ಅವರು ಬಂದು ಆತನ ನೀತಿಯನ್ನೂ, ಆತನು ನಡೆಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು.
❮
❯