ಕೀರ್ತನೆಗಳು 22 : 1 (IRVKN)
ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? [QBR] ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ? [QBR]
ಕೀರ್ತನೆಗಳು 22 : 2 (IRVKN)
ನನ್ನ ದೇವರೇ, ಹಗಲಿನಲ್ಲಿ ಮೊರೆಯಿಡುತ್ತೇನೆ; ಪ್ರತ್ಯುತ್ತರವೇ ಇಲ್ಲ; [QBR] ರಾತ್ರಿಯಲ್ಲಿಯೂ ನನಗೆ ಉಪಶಮನವಿಲ್ಲ. [QBR]
ಕೀರ್ತನೆಗಳು 22 : 3 (IRVKN)
ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ, [QBR] ನೀನು ಪವಿತ್ರಸ್ವರೂಪನು. [QBR]
ಕೀರ್ತನೆಗಳು 22 : 4 (IRVKN)
ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; [QBR] ನಿನ್ನನ್ನು ನಂಬಿ ಉದ್ಧಾರವಾದರು. [QBR]
ಕೀರ್ತನೆಗಳು 22 : 5 (IRVKN)
ನಿನಗೆ ಮೊರೆಯಿಟ್ಟು ವಿಮುಕ್ತರಾದರು; [QBR] ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ. [QBR]
ಕೀರ್ತನೆಗಳು 22 : 6 (IRVKN)
ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; [QBR] ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ. [QBR]
ಕೀರ್ತನೆಗಳು 22 : 7 (IRVKN)
ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ; [QBR] ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ, [QBR]
ಕೀರ್ತನೆಗಳು 22 : 8 (IRVKN)
“ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ; [QBR] ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ” ಎಂದು ಹೇಳುತ್ತಾರೆ. [QBR]
ಕೀರ್ತನೆಗಳು 22 : 9 (IRVKN)
ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ. [QBR] ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ. [QBR]
ಕೀರ್ತನೆಗಳು 22 : 10 (IRVKN)
ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; [QBR] ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ. [QBR]
ಕೀರ್ತನೆಗಳು 22 : 11 (IRVKN)
ನನಗೀಗ ಕಷ್ಟವು ಪ್ರಾಪ್ತವಾಗಿದೆ; [QBR] ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ. [QBR]
ಕೀರ್ತನೆಗಳು 22 : 12 (IRVKN)
ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; [QBR] ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ. [QBR]
ಕೀರ್ತನೆಗಳು 22 : 13 (IRVKN)
ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವುದಕ್ಕೆ ಬಾಯಿ ತೆರೆದಿದ್ದಾರೆ. [QBR]
ಕೀರ್ತನೆಗಳು 22 : 14 (IRVKN)
ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; [QBR] ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. [QBR] ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ. [QBR]
ಕೀರ್ತನೆಗಳು 22 : 15 (IRVKN)
[* ಅಥವಾ ಗಂಟಲು.] ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; [QBR] ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. [QBR] ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ. [QBR]
ಕೀರ್ತನೆಗಳು 22 : 16 (IRVKN)
ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; [QBR] ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. [QBR] ನನ್ನ ಕೈಕಾಲುಗಳನ್ನು ತಿವಿದಿದ್ದಾರೆ. [QBR]
ಕೀರ್ತನೆಗಳು 22 : 17 (IRVKN)
ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು; [QBR] ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ. [QBR]
ಕೀರ್ತನೆಗಳು 22 : 18 (IRVKN)
ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ; [QBR] ನನ್ನ ಅಂಗಿಗಾಗಿ ಚೀಟುಹಾಕುತ್ತಾರೆ. [QBR]
ಕೀರ್ತನೆಗಳು 22 : 19 (IRVKN)
ಯೆಹೋವನೇ, ನನ್ನ ರಕ್ಷಕನೇ, ನೀನಾದರೋ ದೂರವಾಗಿರಬೇಡ; [QBR] ಬೇಗ ಬಂದು ಸಹಾಯಮಾಡು. [QBR]
ಕೀರ್ತನೆಗಳು 22 : 20 (IRVKN)
ಕತ್ತಿಗೆ ಸಿಕ್ಕದಂತೆ ನನ್ನನ್ನು ತಪ್ಪಿಸು; [QBR] ನನ್ನ ಪ್ರಿಯ ಪ್ರಾಣವು ನಾಯಿಯ ವಶವಾಗದಂತೆ ಕಾಪಾಡು. [QBR]
ಕೀರ್ತನೆಗಳು 22 : 21 (IRVKN)
ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು [† ಅಥವಾ ನನಗೆ ಸದುತ್ತರವನ್ನು ಕೊಟ್ಟಿದ್ದೀಯಲ್ಲಾ. ] ತಪ್ಪಿಸು. [QBR]
ಕೀರ್ತನೆಗಳು 22 : 22 (IRVKN)
ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; [QBR] ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. [QBR]
ಕೀರ್ತನೆಗಳು 22 : 23 (IRVKN)
ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; [QBR] ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. [QBR] ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ. [QBR]
ಕೀರ್ತನೆಗಳು 22 : 24 (IRVKN)
ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, [QBR] ಅದಕ್ಕೆ ಅಸಹ್ಯಪಡಲಿಲ್ಲ; [QBR] ತನ್ನ ಮುಖವನ್ನು ಅವನಿಗೆ ಮರೆಮಾಡದೆ, [QBR] ಅವನ ಪ್ರಾರ್ಥನೆಗೆ ಕಿವಿಗೊಟ್ಟನು. [QBR]
ಕೀರ್ತನೆಗಳು 22 : 25 (IRVKN)
ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; [QBR] ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು. [QBR]
ಕೀರ್ತನೆಗಳು 22 : 26 (IRVKN)
ದೀನರು ಉಂಡು ತೃಪ್ತರಾಗುವರು; [QBR] ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. [QBR] [‡ ಅಥವಾ ನಿಮ್ಮ.] ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ. [QBR]
ಕೀರ್ತನೆಗಳು 22 : 27 (IRVKN)
ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; [QBR] ಯೆಹೋವನೇ, ಎಲ್ಲಾ ಜನಾಂಗಗಳವರು [§ ಅಥವಾ ಆತನಿಗೆ.] ನಿನಗೆ ಅಡ್ಡಬೀಳುವರು. [QBR]
ಕೀರ್ತನೆಗಳು 22 : 28 (IRVKN)
ರಾಜ್ಯವು ಯೆಹೋವನದೇ; [QBR] ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು. [QBR]
ಕೀರ್ತನೆಗಳು 22 : 29 (IRVKN)
ಭೂಲೋಕದಲ್ಲಿರುವ ಪುಷ್ಟರೆಲ್ಲರೂ [* ಅಥವಾ ಉಂಡು ಆರಾಧಿಸುವರು.] ಆರಾಧಿಸುವರು; [QBR] ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು. [QBR]
ಕೀರ್ತನೆಗಳು 22 : 30 (IRVKN)
ಆತನನ್ನು ಸೇವಿಸುವವರ ಸಂತಾನದವರು [QBR] ಯೆಹೋವನ ಸಂತಾನದವರೆಂದು ಎಣಿಸಲ್ಪಡವರು. [QBR]
ಕೀರ್ತನೆಗಳು 22 : 31 (IRVKN)
ಅವರು ಬಂದು ಆತನ ನೀತಿಯನ್ನೂ, [QBR] ಆತನು ನಡೆಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31

BG:

Opacity:

Color:


Size:


Font: