ಕೀರ್ತನೆಗಳು 23 : 1 (IRVKN)
ಭಕ್ತರೆಂಬ ಕುರಿಗಳಿಗೆ ಒಳ್ಳೆಯ ಕುರುಬನಾದ ಯೆಹೋವನು ದಾವೀದನ ಕೀರ್ತನೆ. ಯೆಹೋವನು ನನಗೆ ಕುರುಬನು; ಕೊರತೆಪಡೆನು.
ಕೀರ್ತನೆಗಳು 23 : 2 (IRVKN)
ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.
ಕೀರ್ತನೆಗಳು 23 : 3 (IRVKN)
ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ.
ಕೀರ್ತನೆಗಳು 23 : 4 (IRVKN)
ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
ಕೀರ್ತನೆಗಳು 23 : 5 (IRVKN)
ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; [* ಲೂಕ 7: 46 ]ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.
ಕೀರ್ತನೆಗಳು 23 : 6 (IRVKN)
ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.

1 2 3 4 5 6