ಕೀರ್ತನೆಗಳು 25 : 1 (IRVKN)
ಇಬ್ರಿಯ ಅಕ್ಷರಕ್ರಮಾನುಸಾರವಾದ ಪ್ರಾರ್ಥನೆ ದಾವೀದನ ಕೀರ್ತನೆ. ಯೆಹೋವನೇ, ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.
ಕೀರ್ತನೆಗಳು 25 : 2 (IRVKN)
ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ, ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.
ಕೀರ್ತನೆಗಳು 25 : 3 (IRVKN)
ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.
ಕೀರ್ತನೆಗಳು 25 : 4 (IRVKN)
ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು.
ಕೀರ್ತನೆಗಳು 25 : 5 (IRVKN)
ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.
ಕೀರ್ತನೆಗಳು 25 : 6 (IRVKN)
ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.
ಕೀರ್ತನೆಗಳು 25 : 7 (IRVKN)
ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.
ಕೀರ್ತನೆಗಳು 25 : 8 (IRVKN)
ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.
ಕೀರ್ತನೆಗಳು 25 : 9 (IRVKN)
ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.
ಕೀರ್ತನೆಗಳು 25 : 10 (IRVKN)
ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು.
ಕೀರ್ತನೆಗಳು 25 : 11 (IRVKN)
ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು.
ಕೀರ್ತನೆಗಳು 25 : 12 (IRVKN)
ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವರೋ ಅವರಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು.
ಕೀರ್ತನೆಗಳು 25 : 13 (IRVKN)
ಅವರು ಸುಖದಿಂದಲೇ ಇರುವರು; ಅವರ ಸಂತತಿಯವರು ದೇಶವನ್ನು ಅನುಭವಿಸುವರು.
ಕೀರ್ತನೆಗಳು 25 : 14 (IRVKN)
ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.
ಕೀರ್ತನೆಗಳು 25 : 15 (IRVKN)
ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ; ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು.
ಕೀರ್ತನೆಗಳು 25 : 16 (IRVKN)
ನಾನು ಒಬ್ಬೊಂಟಿಗನೂ, ಬಾಧೆಪಡುವವನೂ ಆಗಿದ್ದೇನೆ; ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು.
ಕೀರ್ತನೆಗಳು 25 : 17 (IRVKN)
ನನ್ನ ಮನೋವ್ಯಥೆಗಳನ್ನು ನಿವಾರಿಸು; ಸಂಕಟಗಳಿಂದ ನನ್ನನ್ನು ಬಿಡಿಸು.
ಕೀರ್ತನೆಗಳು 25 : 18 (IRVKN)
ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ, ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು.
ಕೀರ್ತನೆಗಳು 25 : 19 (IRVKN)
ನನಗೆ ಎಷ್ಟೋ ಶತ್ರುಗಳು ಇದ್ದಾರಲ್ಲಾ; ಅವರು ಕಡು ವೈರತ್ವದಿಂದ ನನ್ನನ್ನು ಹಗೆಮಾಡುತ್ತಾರೆ.
ಕೀರ್ತನೆಗಳು 25 : 20 (IRVKN)
ನನ್ನ ಪ್ರಾಣವನ್ನು ಕಾಪಾಡಿ ಉಳಿಸು; ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ, ನನಗೆ ಆಶಾಭಂಗವಾಗಬಾರದು.
ಕೀರ್ತನೆಗಳು 25 : 21 (IRVKN)
ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಮತ್ತು ಯಥಾರ್ಥತ್ವವೂ ನನ್ನನ್ನು ಕಾಯಲಿ.
ಕೀರ್ತನೆಗಳು 25 : 22 (IRVKN)
ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಬಾಧೆಗಳಿಂದ ವಿಮೋಚಿಸು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22