ಕೀರ್ತನೆಗಳು 25 : 1 (IRVKN)
ಯೆಹೋವನೇ, ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ. [QBR]
ಕೀರ್ತನೆಗಳು 25 : 2 (IRVKN)
ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ, [QBR] ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ. [QBR] ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ. [QBR]
ಕೀರ್ತನೆಗಳು 25 : 3 (IRVKN)
ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, [QBR] ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು. [QBR]
ಕೀರ್ತನೆಗಳು 25 : 4 (IRVKN)
ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; [QBR] ನೀನು ಒಪ್ಪುವ ದಾರಿಯನ್ನು ತೋರಿಸು. [QBR]
ಕೀರ್ತನೆಗಳು 25 : 5 (IRVKN)
ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; [QBR] ನೀನೇ ನನ್ನನ್ನು ರಕ್ಷಿಸುವ ದೇವರು; [QBR] ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ. [QBR]
ಕೀರ್ತನೆಗಳು 25 : 6 (IRVKN)
ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, [QBR] ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ. [QBR]
ಕೀರ್ತನೆಗಳು 25 : 7 (IRVKN)
ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, [QBR] ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ. [QBR]
ಕೀರ್ತನೆಗಳು 25 : 8 (IRVKN)
ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; [QBR] ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು. [QBR]
ಕೀರ್ತನೆಗಳು 25 : 9 (IRVKN)
ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; [QBR] ಅವರಿಗೆ ತನ್ನ ಮಾರ್ಗವನ್ನು ತೋರಿಸುವನು. [QBR]
ಕೀರ್ತನೆಗಳು 25 : 10 (IRVKN)
ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, [QBR] ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು. [QBR]
ಕೀರ್ತನೆಗಳು 25 : 11 (IRVKN)
ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; [QBR] ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು. [QBR]
ಕೀರ್ತನೆಗಳು 25 : 12 (IRVKN)
ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವರೋ [QBR] ಅವರಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು. [QBR]
ಕೀರ್ತನೆಗಳು 25 : 13 (IRVKN)
ಅವರು ಸುಖದಿಂದಲೇ ಇರುವರು; [QBR] ಅವರ ಸಂತತಿಯವರು ದೇಶವನ್ನು ಅನುಭವಿಸುವರು. [QBR]
ಕೀರ್ತನೆಗಳು 25 : 14 (IRVKN)
ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; [QBR] ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು. [QBR]
ಕೀರ್ತನೆಗಳು 25 : 15 (IRVKN)
ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ; [QBR] ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು. [QBR]
ಕೀರ್ತನೆಗಳು 25 : 16 (IRVKN)
ನಾನು ಒಬ್ಬೊಂಟಿಗನೂ, ಬಾಧೆಪಡುವವನೂ ಆಗಿದ್ದೇನೆ; [QBR] ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು. [QBR]
ಕೀರ್ತನೆಗಳು 25 : 17 (IRVKN)
ನನ್ನ ಮನೋವ್ಯಥೆಗಳನ್ನು ನಿವಾರಿಸು; [QBR] ಸಂಕಟಗಳಿಂದ ನನ್ನನ್ನು ಬಿಡಿಸು. [QBR]
ಕೀರ್ತನೆಗಳು 25 : 18 (IRVKN)
ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ, [QBR] ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು. [QBR]
ಕೀರ್ತನೆಗಳು 25 : 19 (IRVKN)
ನನಗೆ ಎಷ್ಟೋ ಶತ್ರುಗಳು ಇದ್ದಾರಲ್ಲಾ; [QBR] ಅವರು ಕಡು ವೈರತ್ವದಿಂದ ನನ್ನನ್ನು ಹಗೆಮಾಡುತ್ತಾರೆ. [QBR]
ಕೀರ್ತನೆಗಳು 25 : 20 (IRVKN)
ನನ್ನ ಪ್ರಾಣವನ್ನು ಕಾಪಾಡಿ ಉಳಿಸು; [QBR] ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ, ನನಗೆ ಆಶಾಭಂಗವಾಗಬಾರದು. [QBR]
ಕೀರ್ತನೆಗಳು 25 : 21 (IRVKN)
ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; [QBR] ನಿರ್ದೋಷಭಕ್ತಿಯೂ ಮತ್ತು ಯಥಾರ್ಥತ್ವವೂ ನನ್ನನ್ನು ಕಾಯಲಿ. [QBR]
ಕೀರ್ತನೆಗಳು 25 : 22 (IRVKN)
ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಬಾಧೆಗಳಿಂದ ವಿಮೋಚಿಸು. [PE]

1 2 3 4 5 6 7 8 9 10 11 12 13 14 15 16 17 18 19 20 21 22

BG:

Opacity:

Color:


Size:


Font: