ಕೀರ್ತನೆಗಳು 28 : 1 (IRVKN)
ಭಕ್ತನ ಸ್ತುತಿ ದಾವೀದನ ಕೀರ್ತನೆ. ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.
ಕೀರ್ತನೆಗಳು 28 : 2 (IRVKN)
ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು.
ಕೀರ್ತನೆಗಳು 28 : 3 (IRVKN)
ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ, ಒಳಗೆ ಕೇಡಾಗಲಿ ಎಂದು ಯೋಚಿಸುವವರು.
ಕೀರ್ತನೆಗಳು 28 : 4 (IRVKN)
ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.
ಕೀರ್ತನೆಗಳು 28 : 5 (IRVKN)
ಅವರು ಯೆಹೋವನ ಕಾರ್ಯಗಳನ್ನೂ ಮತ್ತು ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ.
ಕೀರ್ತನೆಗಳು 28 : 6 (IRVKN)
ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ; ಆತನಿಗೆ ಸ್ತೋತ್ರವಾಗಲಿ.
ಕೀರ್ತನೆಗಳು 28 : 7 (IRVKN)
ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
ಕೀರ್ತನೆಗಳು 28 : 8 (IRVKN)
ಯೆಹೋವನು ತನ್ನ ಜನರಿಗೆ ಬಲವೂ, ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.
ಕೀರ್ತನೆಗಳು 28 : 9 (IRVKN)
ಯೆಹೋವನೇ, ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ನೀನು ಅವರ ಕುರುಬನಾಗಿರು; ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.
❮
❯