ಕೀರ್ತನೆಗಳು 29 : 1 (IRVKN)
ಮೇಘಮಂಡಲದಲ್ಲಿ ಕಾಣಿಸುವ ಯೆಹೋವನ ಮಹಿಮೆ *ದಾವೀದನ ಕೀರ್ತನೆ.
ಯೆರೆ 10:13; ಯೆಶಾ 30:30 *
ದೇವದೂತರುಗಳಿರಾ, ಪರಮಪ್ರಭಾವವು, ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ.
ಕೀರ್ತನೆಗಳು 29 : 2 (IRVKN)
ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.
ಕೀರ್ತನೆಗಳು 29 : 3 (IRVKN)
ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.
ಕೀರ್ತನೆಗಳು 29 : 4 (IRVKN)
ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, ಎಷ್ಟೋ ಗಂಭೀರವಾದದ್ದು.
ಕೀರ್ತನೆಗಳು 29 : 5 (IRVKN)
ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ.
ಕೀರ್ತನೆಗಳು 29 : 6 (IRVKN)
ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ, ಸಿರ್ಯೋನ್ ಬೆಟ್ಟವು ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ.
ಕೀರ್ತನೆಗಳು 29 : 7 (IRVKN)
ಯೆಹೋವನ ಗರ್ಜನೆಗೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ.
ಕೀರ್ತನೆಗಳು 29 : 8 (IRVKN)
ಯೆಹೋವನ ಗರ್ಜನೆಗೆ ಕಾಡು ಹೊರಳಾಡುತ್ತದೆ; ಕಾದೇಶ್ ಅರಣ್ಯವು ಕಂಪಿಸುತ್ತದೆ.
ಕೀರ್ತನೆಗಳು 29 : 9 (IRVKN)
* ಅಥವಾ ಯೆಹೋವನ ಗರ್ಜನೆಯು ಗರ್ಭದ ಜಿಂಕೆಗಳು ಈಯುತ್ತವೆ ಯೆಹೋವನ ಗರ್ಜನೆಯು ದೇವದಾರು ಮರಗಳನ್ನು ಕದಲಿಸುತ್ತದೆ; ಕಾಡಿನ ಮರಗಳು ಬರಿದಾಗುತ್ತವೆ. ಆಗ ಆತನ ಮಂದಿರದಲ್ಲಿರುವವರೆಲ್ಲರು, “ಎಷ್ಟೋ ಪ್ರಭಾವ!” ಎನ್ನುತ್ತಾರೆ.
ಕೀರ್ತನೆಗಳು 29 : 10 (IRVKN)
ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು.
ಕೀರ್ತನೆಗಳು 29 : 11 (IRVKN)
ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.

1 2 3 4 5 6 7 8 9 10 11