ಕೀರ್ತನೆಗಳು 3 : 1 (IRVKN)
ಶತ್ರುಬಾಧಿತನಾದ ದೈವಭಕ್ತನ ಉದಯಗೀತೆ ದಾವೀದನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿಹೋದಾಗ ರಚಿಸಿದ ಕೀರ್ತನೆ. ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತ ಜನರು ಅತ್ಯಧಿಕವಾಗಿದ್ದಾರೆ.
ಕೀರ್ತನೆಗಳು 3 : 2 (IRVKN)
ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ * ಅಥವಾ ರಕ್ಷಣೆಯುಂಟಾಗುವುದಿಲ್ಲ. ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. QSS ಸೆಲಾ SE
ಕೀರ್ತನೆಗಳು 3 : 3 (IRVKN)
ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; ನೀನು ನನ್ನ ಗೌರವಕ್ಕೆ ಆಧಾರನೂ, ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.
ಕೀರ್ತನೆಗಳು 3 : 4 (IRVKN)
ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. QSS ಸೆಲಾ. SE
ಕೀರ್ತನೆಗಳು 3 : 5 (IRVKN)
ಯೆಹೋವನು ನನ್ನನ್ನು ಕಾಪಾಡುವವನು, ಆದುದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು.
ಕೀರ್ತನೆಗಳು 3 : 6 (IRVKN)
ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು.
ಕೀರ್ತನೆಗಳು 3 : 7 (IRVKN)
ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು.
ಕೀರ್ತನೆಗಳು 3 : 8 (IRVKN)
† ಅಥವಾ ರಕ್ಷಣೆಯು. ಜಯವು ಯೆಹೋವನಿಂದಲೇ ಉಂಟಾಗುವುದು. ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. QSS ಸೆಲಾ. SE
❮
❯
1
2
3
4
5
6
7
8