ಕೀರ್ತನೆಗಳು 30 : 1 (IRVKN)
ಅಪಾಯದಿಂದ ತಪ್ಪಿಸಲ್ಪಟ್ಟವರು ಯೆಹೋವನನ್ನು ಕೊಂಡಾಡುವುದು *ದಾವೀದನ ಕೀರ್ತನೆ, ದೇವಾಲಯದ ಪ್ರತಿಷ್ಠೆಯಲ್ಲಿ ಹಾಡತಕ್ಕದ್ದು.
ಕೀರ್ತ 6; ಯೋಹಾ 10:22 *ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ, ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.
ಕೀರ್ತನೆಗಳು 30 : 2 (IRVKN)
ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ.
ಕೀರ್ತನೆಗಳು 30 : 3 (IRVKN)
ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ.
ಕೀರ್ತನೆಗಳು 30 : 4 (IRVKN)
ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.
ಕೀರ್ತನೆಗಳು 30 : 5 (IRVKN)
ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.
ಕೀರ್ತನೆಗಳು 30 : 6 (IRVKN)
ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” ಎಂದು ಹೇಳಿಕೊಂಡಿದ್ದೆನು.
ಕೀರ್ತನೆಗಳು 30 : 7 (IRVKN)
ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು.
ಕೀರ್ತನೆಗಳು 30 : 8 (IRVKN)
ಯೆಹೋವನೇ, ನಿನಗೆ ಮೊರೆಯಿಟ್ಟೆನು; ನನ್ನ ಒಡೆಯನಿಗೆ ಬಿನ್ನವಿಸಿ,
ಕೀರ್ತನೆಗಳು 30 : 9 (IRVKN)
“ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು?
ಕೀರ್ತನೆಗಳು 30 : 10 (IRVKN)
ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು; ಯೆಹೋವನೇ, ನನ್ನ ಸಹಾಯಕ್ಕೆ ಬಾ” ಎಂದು ಹೇಳಿದೆನು.
ಕೀರ್ತನೆಗಳು 30 : 11 (IRVKN)
ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.
ಕೀರ್ತನೆಗಳು 30 : 12 (IRVKN)
ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.
❮
❯
1
2
3
4
5
6
7
8
9
10
11
12