ಕೀರ್ತನೆಗಳು 31 : 1 (IRVKN)
ಯೆಹೋವನೇ, ನಿನ್ನ ಮೊರೆಹೊಕ್ಕಿದ್ದೇನೆ; [QBR] ನನ್ನನ್ನು ಎಂದಿಗೂ ಅವಮಾನಕ್ಕೆ ಗುರಿಪಡಿಸಬೇಡ. [QBR] ನಿನ್ನ ನೀತಿಗನುಸಾರವಾಗಿ ನನ್ನನ್ನು ರಕ್ಷಿಸು. [QBR]
ಕೀರ್ತನೆಗಳು 31 : 2 (IRVKN)
ಕಿವಿಗೊಟ್ಟು ಕೇಳಿ ಬೇಗನೆ ನನ್ನನ್ನು ಬಿಡಿಸು; [QBR] ನನ್ನನ್ನು ರಕ್ಷಿಸುವ ಆಶ್ರಯಗಿರಿಯೂ, ದುರ್ಗಸ್ಥಾನವೂ ಆಗಿರು. [QBR]
ಕೀರ್ತನೆಗಳು 31 : 3 (IRVKN)
ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ; [QBR] ಆದುದರಿಂದ ನಿನ್ನ ಹೆಸರಿನ ನಿಮಿತ್ತ ದಾರಿತೋರಿಸಿ ನನ್ನನ್ನು ನಡೆಸು. [QBR]
ಕೀರ್ತನೆಗಳು 31 : 4 (IRVKN)
ಶತ್ರುಗಳು ನನಗೆ ರಹಸ್ಯವಾಗಿ ಹಾಕಿದ ಬಲೆಯೊಳಗೆ [QBR] ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು; [QBR]
ಕೀರ್ತನೆಗಳು 31 : 5 (IRVKN)
ನೀನೇ ನನಗೆ ಆಧಾರವಲ್ಲವೇ; [QBR] ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. [QBR] ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ. [QBR]
ಕೀರ್ತನೆಗಳು 31 : 6 (IRVKN)
ವ್ಯರ್ಥವಾದ ವಿಗ್ರಹಗಳನ್ನೂ ಅವಲಂಬಿಸಿದವರನ್ನು ನಾನು ದ್ವೇಷಿಸುತ್ತೇನೆ; [QBR] ನಾನಾದರೋ ಯೆಹೋವನಲ್ಲಿ ಭರವಸವಿಟ್ಟಿದ್ದೇನೆ. [QBR]
ಕೀರ್ತನೆಗಳು 31 : 7 (IRVKN)
ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; [QBR] ನಾನು ಕುಗ್ಗಿಹೋಗಿರುವುದನ್ನು ನೋಡಿ, [QBR] ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ. [QBR]
ಕೀರ್ತನೆಗಳು 31 : 8 (IRVKN)
ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ; [QBR] ನಿರಾತಂಕ ಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ. [QBR]
ಕೀರ್ತನೆಗಳು 31 : 9 (IRVKN)
ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ. [QBR] ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣು ಗುಡ್ಡೆ ಸೇದಿಹೋಗಿದೆ; ದೇಹಾತ್ಮಗಳು ಕುಗ್ಗಿಹೋದವು. [QBR]
ಕೀರ್ತನೆಗಳು 31 : 10 (IRVKN)
ನನ್ನ ಜೀವಮಾನವೆಲ್ಲಾ ದುಃಖದಲ್ಲಿಯೂ, ನಿಟ್ಟುಸಿರಿನಲ್ಲಿಯೂ ಕಳೆದುಹೋಗುತ್ತಾ ಇದೆ; [QBR] ನನ್ನ [* ಅಥವಾ ಅಪರಾಧದಿಂದ. ] ಸಂಕಟಗಳಿಂದ ನನ್ನ ಶಕ್ತಿಯು ಕುಂದಿಹೋಗಿದೆ; [QBR] ನನ್ನ ಎಲುಬುಗಳು ಸವೆದುಹೋಗಿವೆ. [QBR]
ಕೀರ್ತನೆಗಳು 31 : 11 (IRVKN)
ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; [QBR] ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. [QBR] ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; [QBR] ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ. [QBR]
ಕೀರ್ತನೆಗಳು 31 : 12 (IRVKN)
ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು; [QBR] ಒಡೆದ ಬೋಕಿಯಂತಿದ್ದೇನೆ. [QBR]
ಕೀರ್ತನೆಗಳು 31 : 13 (IRVKN)
ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ; [QBR] ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ; [QBR] ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ. [QBR]
ಕೀರ್ತನೆಗಳು 31 : 14 (IRVKN)
ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ; [QBR] ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ. [QBR]
ಕೀರ್ತನೆಗಳು 31 : 15 (IRVKN)
ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; [QBR] ಹಿಂದಟ್ಟುವ ಶತ್ರುಗಳಿಂದ ನನ್ನನ್ನು ತಪ್ಪಿಸಿ ಕಾಪಾಡು. [QBR]
ಕೀರ್ತನೆಗಳು 31 : 16 (IRVKN)
ನಿನ್ನ ಸೇವಕನನ್ನು ಪ್ರಸನ್ನಮುಖದಿಂದ ನೋಡು; [QBR] ಪ್ರೀತಿಯಿಂದ ನನ್ನನ್ನು ರಕ್ಷಿಸು. [QBR]
ಕೀರ್ತನೆಗಳು 31 : 17 (IRVKN)
ಯೆಹೋವನೇ, ಮೊರೆಯಿಟ್ಟಿದ್ದೇನೆ; ನನ್ನನ್ನು ನಿರಾಶೆಪಡಿಸಬೇಡ. [QBR] ದುಷ್ಟರಿಗೇ ಆಶಾಭಂಗವಾಗಲಿ; ಅವರು ಸ್ತಬ್ಧರಾಗಿ ಪಾತಾಳಕ್ಕೆ ಬೀಳಲಿ. [QBR]
ಕೀರ್ತನೆಗಳು 31 : 18 (IRVKN)
ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ, ಕೊಬ್ಬಿನಿಂದಲೂ [QBR] ಅವರಿಗೆ ವಿರುದ್ಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ. [QBR]
ಕೀರ್ತನೆಗಳು 31 : 19 (IRVKN)
ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ, [QBR] ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ [QBR] ಎಷ್ಟೋ ವಿಶೇಷವಾಗಿವೆ. [QBR]
ಕೀರ್ತನೆಗಳು 31 : 20 (IRVKN)
ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ [QBR] ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; [QBR] ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗುಪ್ತಸ್ಥಳದಲ್ಲಿ ಅಡಗಿಸುತ್ತೀ. [QBR]
ಕೀರ್ತನೆಗಳು 31 : 21 (IRVKN)
ಮುತ್ತಿಗೆ ಹಾಕಲ್ಪಟ್ಟಿರುವ ನಗರದಲ್ಲಿದ್ದ ನನಗೆ, [QBR] ತನ್ನ ಕೃಪೆಯನ್ನು ಆಶ್ಚರ್ಯಕರವಾಗಿ ತೋರಿಸಿದ ಯೆಹೋವನಿಗೆ ಸ್ತೋತ್ರ. [QBR]
ಕೀರ್ತನೆಗಳು 31 : 22 (IRVKN)
ನಾನಂತೂ ಭಯಭ್ರಾಂತನಾಗಿ, “ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನು” ಎಂದು ಅಂದುಕೊಂಡೆನು; [QBR] ಆದರೂ ನಾನು ಮೊರೆಯಿಡಲು ನೀನು ಕೇಳಿದಿ. [QBR]
ಕೀರ್ತನೆಗಳು 31 : 23 (IRVKN)
ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ. [QBR] ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ; [QBR] ಅಹಂಕಾರಿಗಳಿಗೆ ಚೆನ್ನಾಗಿ ಮುಯ್ಯಿತೀರಿಸುತ್ತಾನೆ. [QBR]
ಕೀರ್ತನೆಗಳು 31 : 24 (IRVKN)
ಯೆಹೋವನನ್ನು ನಿರೀಕ್ಷಿಸುವವರೇ, ದೃಢವಾಗಿರ್ರಿ; [QBR] ನಿಮ್ಮ ಹೃದಯವು ಧೈರ್ಯದಿಂದಿರಲಿ. [PE]
❮
❯