ಕೀರ್ತನೆಗಳು 32 : 1 (IRVKN)
{ಪಾಪಪರಿಹಾರ ಮತ್ತು ನಂಬಿಕೆಯಿಂದ ಉಂಟಾಗುವ ಭಾಗ್ಯ} [PS] ಯಾರ ದ್ರೋಹವು ಪರಿಹಾರವಾಗಿದೆಯೋ, [QBR] ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು. [QBR]
ಕೀರ್ತನೆಗಳು 32 : 2 (IRVKN)
ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ? [QBR] ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು. [QBR]
ಕೀರ್ತನೆಗಳು 32 : 3 (IRVKN)
ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, [QBR] ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು. [QBR]
ಕೀರ್ತನೆಗಳು 32 : 4 (IRVKN)
ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; [QBR] ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ
ಕೀರ್ತನೆಗಳು 32 : 5 (IRVKN)
ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು [QBR] ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. [QBR] ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ
ಕೀರ್ತನೆಗಳು 32 : 6 (IRVKN)
ಆದುದರಿಂದ ಭಕ್ತರೆಲ್ಲರು [* ಅಥವಾ ಕಷ್ಟಕಾಲದಲ್ಲಿ ಅಥವಾ ನೀನು ದೊರಕುವ ಕಾಲದಲ್ಲಿ.] ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; [QBR] ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ. [QBR]
ಕೀರ್ತನೆಗಳು 32 : 7 (IRVKN)
ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; [QBR] ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. ಸೆಲಾ
ಕೀರ್ತನೆಗಳು 32 : 8 (IRVKN)
ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; [QBR] ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ. [QBR]
ಕೀರ್ತನೆಗಳು 32 : 9 (IRVKN)
ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ [QBR] ಹೇಸರಗತ್ತೆಯಂತಾಗಲಿ ಇರಬೇಡಿರಿ; [QBR] ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ. [QBR]
ಕೀರ್ತನೆಗಳು 32 : 10 (IRVKN)
ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; [QBR] ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು. [QBR]
ಕೀರ್ತನೆಗಳು 32 : 11 (IRVKN)
ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ; [QBR] ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ. [PE]

1 2 3 4 5 6 7 8 9 10 11

BG:

Opacity:

Color:


Size:


Font: