ಕೀರ್ತನೆಗಳು 33 : 1 (IRVKN)
ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ; [QBR] ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ. [QBR]
ಕೀರ್ತನೆಗಳು 33 : 2 (IRVKN)
ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; [QBR] ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ. [QBR]
ಕೀರ್ತನೆಗಳು 33 : 3 (IRVKN)
ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ; [QBR] ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ. [QBR]
ಕೀರ್ತನೆಗಳು 33 : 4 (IRVKN)
ಯೆಹೋವನ ವಚನವು ಯಥಾರ್ಥವಾದದ್ದು; [QBR] ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ. [QBR]
ಕೀರ್ತನೆಗಳು 33 : 5 (IRVKN)
ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; [QBR] ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ. [QBR]
ಕೀರ್ತನೆಗಳು 33 : 6 (IRVKN)
ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; [QBR] ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು. [QBR]
ಕೀರ್ತನೆಗಳು 33 : 7 (IRVKN)
ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ; [QBR] ಭೂಮಿಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ. [QBR]
ಕೀರ್ತನೆಗಳು 33 : 8 (IRVKN)
ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ; [QBR] ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ. [QBR]
ಕೀರ್ತನೆಗಳು 33 : 9 (IRVKN)
ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; [QBR] ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು. [QBR]
ಕೀರ್ತನೆಗಳು 33 : 10 (IRVKN)
ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; [QBR] ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ. [QBR]
ಕೀರ್ತನೆಗಳು 33 : 11 (IRVKN)
ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; [QBR] ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ. [QBR]
ಕೀರ್ತನೆಗಳು 33 : 12 (IRVKN)
ಯಾರಿಗೆ ಯೆಹೋವನೇ ದೇವರಾಗಿದ್ದಾನೋ, [QBR] ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು. [QBR]
ಕೀರ್ತನೆಗಳು 33 : 13 (IRVKN)
ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ; [QBR]
ಕೀರ್ತನೆಗಳು 33 : 14 (IRVKN)
ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ. [QBR]
ಕೀರ್ತನೆಗಳು 33 : 15 (IRVKN)
ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ, [QBR] ಅವರ ಕೃತ್ಯಗಳನ್ನೆಲ್ಲಾ ವಿವೇಚಿಸುವವನೂ ಆತನೇ. [QBR]
ಕೀರ್ತನೆಗಳು 33 : 16 (IRVKN)
ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; [QBR] ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ. [QBR]
ಕೀರ್ತನೆಗಳು 33 : 17 (IRVKN)
ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; [QBR] ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು. [QBR]
ಕೀರ್ತನೆಗಳು 33 : 18 (IRVKN)
ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; [QBR] ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ. [QBR]
ಕೀರ್ತನೆಗಳು 33 : 19 (IRVKN)
ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; [QBR] ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು. [QBR]
ಕೀರ್ತನೆಗಳು 33 : 20 (IRVKN)
ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; [QBR] ನಮ್ಮ ಸಹಾಯವೂ, ಗುರಾಣಿಯೂ ಆತನೇ. [QBR]
ಕೀರ್ತನೆಗಳು 33 : 21 (IRVKN)
ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು; [QBR] ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ. [QBR]
ಕೀರ್ತನೆಗಳು 33 : 22 (IRVKN)
ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ; [QBR] ನಿನ್ನ ಕೃಪೆಯು ನಮ್ಮ ಮೇಲೆ ಇರಲಿ. [PE]

1 2 3 4 5 6 7 8 9 10 11 12 13 14 15 16 17 18 19 20 21 22

BG:

Opacity:

Color:


Size:


Font: