ಕೀರ್ತನೆಗಳು 33 : 1 (IRVKN)
ರಕ್ಷಕನನ್ನು ಕೀರ್ತಿಸುವ ಭಕ್ತ ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ; ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ.
ಕೀರ್ತನೆಗಳು 33 : 2 (IRVKN)
ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ.
ಕೀರ್ತನೆಗಳು 33 : 3 (IRVKN)
ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ; ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ.
ಕೀರ್ತನೆಗಳು 33 : 4 (IRVKN)
ಯೆಹೋವನ ವಚನವು ಯಥಾರ್ಥವಾದದ್ದು; ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ.
ಕೀರ್ತನೆಗಳು 33 : 5 (IRVKN)
ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ.
ಕೀರ್ತನೆಗಳು 33 : 6 (IRVKN)
ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.
ಕೀರ್ತನೆಗಳು 33 : 7 (IRVKN)
ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ; ಭೂಮಿಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ.
ಕೀರ್ತನೆಗಳು 33 : 8 (IRVKN)
ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ; ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ.
ಕೀರ್ತನೆಗಳು 33 : 9 (IRVKN)
ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.
ಕೀರ್ತನೆಗಳು 33 : 10 (IRVKN)
ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.
ಕೀರ್ತನೆಗಳು 33 : 11 (IRVKN)
ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.
ಕೀರ್ತನೆಗಳು 33 : 12 (IRVKN)
ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.
ಕೀರ್ತನೆಗಳು 33 : 13 (IRVKN)
ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ;
ಕೀರ್ತನೆಗಳು 33 : 14 (IRVKN)
ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ.
ಕೀರ್ತನೆಗಳು 33 : 15 (IRVKN)
ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ, ಅವರ ಕೃತ್ಯಗಳನ್ನೆಲ್ಲಾ ವಿವೇಚಿಸುವವನೂ ಆತನೇ.
ಕೀರ್ತನೆಗಳು 33 : 16 (IRVKN)
ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.
ಕೀರ್ತನೆಗಳು 33 : 17 (IRVKN)
ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು.
ಕೀರ್ತನೆಗಳು 33 : 18 (IRVKN)
ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.
ಕೀರ್ತನೆಗಳು 33 : 19 (IRVKN)
ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.
ಕೀರ್ತನೆಗಳು 33 : 20 (IRVKN)
ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ, ಗುರಾಣಿಯೂ ಆತನೇ.
ಕೀರ್ತನೆಗಳು 33 : 21 (IRVKN)
ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು; ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ.
ಕೀರ್ತನೆಗಳು 33 : 22 (IRVKN)
ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ; ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.

1 2 3 4 5 6 7 8 9 10 11 12 13 14 15 16 17 18 19 20 21 22