ಕೀರ್ತನೆಗಳು 34 : 1 (IRVKN)
ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; [QBR] ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು. [QBR]
ಕೀರ್ತನೆಗಳು 34 : 2 (IRVKN)
ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; [QBR] ಇದನ್ನು ದೀನರು ಕೇಳಿ ಸಂತೋಷಿಸುವರು. [QBR]
ಕೀರ್ತನೆಗಳು 34 : 3 (IRVKN)
ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; [QBR] ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ. [QBR]
ಕೀರ್ತನೆಗಳು 34 : 4 (IRVKN)
ನಾನು ಯೆಹೋವನ ಸನ್ನಿಧಿಯಲ್ಲಿ [* ಅಥವಾ ಹುಡುಕಿದೆನು.] ಬೇಡಿಕೊಳ್ಳಲು, [QBR] ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು. [QBR]
ಕೀರ್ತನೆಗಳು 34 : 5 (IRVKN)
ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; [QBR] ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ. [QBR]
ಕೀರ್ತನೆಗಳು 34 : 6 (IRVKN)
ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, [QBR] ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು. [QBR]
ಕೀರ್ತನೆಗಳು 34 : 7 (IRVKN)
ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, [QBR] ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ. [QBR]
ಕೀರ್ತನೆಗಳು 34 : 8 (IRVKN)
ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; [QBR] ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು. [QBR]
ಕೀರ್ತನೆಗಳು 34 : 9 (IRVKN)
ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; [QBR] ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ. [QBR]
ಕೀರ್ತನೆಗಳು 34 : 10 (IRVKN)
ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; [QBR] ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ. [QBR]
ಕೀರ್ತನೆಗಳು 34 : 11 (IRVKN)
ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; [QBR] ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು. [QBR]
ಕೀರ್ತನೆಗಳು 34 : 12 (IRVKN)
ದೀರ್ಘಾಯುಷ್ಯವು ಬೇಕೋ? [QBR] ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ? [QBR]
ಕೀರ್ತನೆಗಳು 34 : 13 (IRVKN)
ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; [QBR] ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ. [QBR]
ಕೀರ್ತನೆಗಳು 34 : 14 (IRVKN)
ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; [QBR] ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು. [QBR]
ಕೀರ್ತನೆಗಳು 34 : 15 (IRVKN)
ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; [QBR] ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ. [QBR]
ಕೀರ್ತನೆಗಳು 34 : 16 (IRVKN)
ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; [QBR] ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು. [QBR]
ಕೀರ್ತನೆಗಳು 34 : 17 (IRVKN)
ಯೆಹೋವನು ನೀತಿವಂತರ ಕೂಗನ್ನು ಕೇಳಿ, [QBR] ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ. [QBR]
ಕೀರ್ತನೆಗಳು 34 : 18 (IRVKN)
ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; [QBR] ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ. [QBR]
ಕೀರ್ತನೆಗಳು 34 : 19 (IRVKN)
ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, [QBR] ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ. [QBR]
ಕೀರ್ತನೆಗಳು 34 : 20 (IRVKN)
ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; [QBR] ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ. [QBR]
ಕೀರ್ತನೆಗಳು 34 : 21 (IRVKN)
ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; [QBR] ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು. [QBR]
ಕೀರ್ತನೆಗಳು 34 : 22 (IRVKN)
ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. [QBR] ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ. [PE]

1 2 3 4 5 6 7 8 9 10 11 12 13 14 15 16 17 18 19 20 21 22

BG:

Opacity:

Color:


Size:


Font: