ಕೀರ್ತನೆಗಳು 34 : 1 (IRVKN)
ಯೆಹೋವನು ಸದಾ ಭಕ್ತಪಾಲಕನೆಂದು ವರ್ಣಿಸುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗ ರಚಿಸಿದ ಕೀರ್ತನೆ. ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.
ಕೀರ್ತನೆಗಳು 34 : 2 (IRVKN)
ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು.
ಕೀರ್ತನೆಗಳು 34 : 3 (IRVKN)
ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.
ಕೀರ್ತನೆಗಳು 34 : 4 (IRVKN)
ನಾನು ಯೆಹೋವನ ಸನ್ನಿಧಿಯಲ್ಲಿ * ಅಥವಾ ಹುಡುಕಿದೆನು. ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.
ಕೀರ್ತನೆಗಳು 34 : 5 (IRVKN)
ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ.
ಕೀರ್ತನೆಗಳು 34 : 6 (IRVKN)
ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.
ಕೀರ್ತನೆಗಳು 34 : 7 (IRVKN)
ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.
ಕೀರ್ತನೆಗಳು 34 : 8 (IRVKN)
ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.
ಕೀರ್ತನೆಗಳು 34 : 9 (IRVKN)
ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ.
ಕೀರ್ತನೆಗಳು 34 : 10 (IRVKN)
ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ.
ಕೀರ್ತನೆಗಳು 34 : 11 (IRVKN)
ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.
ಕೀರ್ತನೆಗಳು 34 : 12 (IRVKN)
ದೀರ್ಘಾಯುಷ್ಯವು ಬೇಕೋ? ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ?
ಕೀರ್ತನೆಗಳು 34 : 13 (IRVKN)
ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.
ಕೀರ್ತನೆಗಳು 34 : 14 (IRVKN)
ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.
ಕೀರ್ತನೆಗಳು 34 : 15 (IRVKN)
ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.
ಕೀರ್ತನೆಗಳು 34 : 16 (IRVKN)
ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.
ಕೀರ್ತನೆಗಳು 34 : 17 (IRVKN)
ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.
ಕೀರ್ತನೆಗಳು 34 : 18 (IRVKN)
ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
ಕೀರ್ತನೆಗಳು 34 : 19 (IRVKN)
ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.
ಕೀರ್ತನೆಗಳು 34 : 20 (IRVKN)
ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.
ಕೀರ್ತನೆಗಳು 34 : 21 (IRVKN)
ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು.
ಕೀರ್ತನೆಗಳು 34 : 22 (IRVKN)
ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ.

1 2 3 4 5 6 7 8 9 10 11 12 13 14 15 16 17 18 19 20 21 22