ಕೀರ್ತನೆಗಳು 35 : 1 (IRVKN)
ಯೆಹೋವನೇ, ನನ್ನ ಸಂಗಡ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯಮಾಡು; [QBR] ನನ್ನ ಮೇಲೆ ಯುದ್ಧ ಮಾಡುವವರ ಸಂಗಡ ಯುದ್ಧ ಮಾಡು. [QBR]
ಕೀರ್ತನೆಗಳು 35 : 2 (IRVKN)
ಖೇಡ್ಯ ಮತ್ತು ಗುರಾಣಿಯನ್ನು ಹಿಡಿದುಕೊಂಡು, [QBR] ನನಗೆ ಸಹಾಯಕನಾಗಿ ನಿಲ್ಲು. [QBR]
ಕೀರ್ತನೆಗಳು 35 : 3 (IRVKN)
ನೀನು ಭರ್ಜಿಯನ್ನೂ ಹಾಗೂ ಯುದ್ಧದ ಕೊಡಲಿಯನ್ನೂ ಹಿಡಿದು, [QBR] ನನ್ನನ್ನು ಹಿಂದಟ್ಟುವ ವೈರಿಗಳನ್ನು ಎದುರಿಸು; [QBR] “ನಾನೇ ನಿನ್ನ ರಕ್ಷಣೆ” ಎಂದು ಅಭಯಕೊಡು. [QBR]
ಕೀರ್ತನೆಗಳು 35 : 4 (IRVKN)
ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; [QBR] ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ. [QBR]
ಕೀರ್ತನೆಗಳು 35 : 5 (IRVKN)
ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; [QBR] ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ. [QBR]
ಕೀರ್ತನೆಗಳು 35 : 6 (IRVKN)
ಕತ್ತಲೆಯೂ, ಜಾರಿಕೆಯೂ ಇರುವ ದಾರಿಯಲ್ಲಿ [QBR] ಯೆಹೋವನ ದೂತನು ಅವರನ್ನು ಹಿಂದಟ್ಟಲಿ. [QBR]
ಕೀರ್ತನೆಗಳು 35 : 7 (IRVKN)
ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; [QBR] ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ. [QBR]
ಕೀರ್ತನೆಗಳು 35 : 8 (IRVKN)
ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ; [QBR] ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. [QBR] ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ. [QBR]
ಕೀರ್ತನೆಗಳು 35 : 9 (IRVKN)
ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವುದು; [QBR] ಆತನಿಂದಾದ ರಕ್ಷಣೆಯ ನಿಮಿತ್ತ ಆನಂದಪಡುವೆನು. [QBR]
ಕೀರ್ತನೆಗಳು 35 : 10 (IRVKN)
ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ, [QBR] ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, [QBR] “ನಿನಗೆ ಸಮಾನರು ಯಾರಿದ್ದಾರೆ?” ಎಂದು ನನ್ನ ಎಲುಬುಗಳೆಲ್ಲಾ ಹೇಳುವವು. [QBR]
ಕೀರ್ತನೆಗಳು 35 : 11 (IRVKN)
ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; [QBR] ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ. [QBR]
ಕೀರ್ತನೆಗಳು 35 : 12 (IRVKN)
ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; [QBR] ನಾನು ದಿಕ್ಕಿಲ್ಲದವನಾದೆನು. [QBR]
ಕೀರ್ತನೆಗಳು 35 : 13 (IRVKN)
ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; [QBR] ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. [QBR] [* ಅಥವಾ ನನ್ನ ತಲೆಬಾಗಿ ಪ್ರಾರ್ಥಿಸಿದನು. ಅಥವಾ ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.] ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ. [QBR]
ಕೀರ್ತನೆಗಳು 35 : 14 (IRVKN)
ಅಸ್ವಸ್ಥನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡೆನು; [QBR] ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು. [QBR]
ಕೀರ್ತನೆಗಳು 35 : 15 (IRVKN)
ಆದರೂ ನನಗೆ ಆಪತ್ತು ಬಂದಾಗ, [QBR] ಅವರು ಸಂತೋಷಿಸುತ್ತಾ ಕೂಡಿಕೊಂಡರು; [QBR] ನಿರಾಕಾರಣವಾಗಿ ಈ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು, [QBR] ಸೂರೆ ಮಾಡುವುದನ್ನು ಬಿಡಲೇ ಇಲ್ಲ. [QBR]
ಕೀರ್ತನೆಗಳು 35 : 16 (IRVKN)
ಆಹಾರಕ್ಕೋಸ್ಕರ ಪರಿಹಾಸ್ಯಮಾಡುವ ಮೂರ್ಖರ ಸಂಗಡ, [QBR] ನನ್ನ ಮೇಲೆ ಹಲ್ಲುಕಡಿಯುತ್ತಾರೆ. [QBR]
ಕೀರ್ತನೆಗಳು 35 : 17 (IRVKN)
ಕರ್ತನೇ, ಇನ್ನೆಷ್ಟರ ವರೆಗೆ ಸುಮ್ಮನೆ ನೋಡುತ್ತಾ ಇರುವಿ? [QBR] ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು; [QBR] ನನ್ನ ಪರಮಪ್ರಿಯ ಪ್ರಾಣವನ್ನು ಆ ಸಿಂಹಗಳ ಬಾಯಿಗೆ ಸಿಕ್ಕದಂತೆ ತಪ್ಪಿಸು. [QBR]
ಕೀರ್ತನೆಗಳು 35 : 18 (IRVKN)
ಆಗ ನಾನು ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; [QBR] ಬಹುಜನರ ಮುಂದೆ ಸ್ತುತಿಸುವೆನು. [QBR]
ಕೀರ್ತನೆಗಳು 35 : 19 (IRVKN)
ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; [QBR] ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ. [QBR]
ಕೀರ್ತನೆಗಳು 35 : 20 (IRVKN)
ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; [QBR] ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ. [QBR]
ಕೀರ್ತನೆಗಳು 35 : 21 (IRVKN)
ಅವರು ನನ್ನನ್ನು ನೋಡಿ ಬಾಯಿಕಿಸಿದು, “ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ” ಎಂದು ಅನ್ನುತ್ತಾರೆ. [QBR]
ಕೀರ್ತನೆಗಳು 35 : 22 (IRVKN)
ಯೆಹೋವನೇ, ನೀನೇ ನೋಡಿದಿಯಲ್ಲವೇ; [QBR] ಸುಮ್ಮನಿರಬೇಡ; [QBR] ನನ್ನ ಒಡೆಯನೇ, ನನ್ನಿಂದ ದೂರವಾಗಿರುವುದೇಕೆ? [QBR]
ಕೀರ್ತನೆಗಳು 35 : 23 (IRVKN)
ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು; [QBR] ನನ್ನ ಕರ್ತನೇ, ಎಚ್ಚೆತ್ತು ನನ್ನ ವಿವಾದವನ್ನು ವಿಚಾರಿಸು. [QBR]
ಕೀರ್ತನೆಗಳು 35 : 24 (IRVKN)
ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; [QBR] ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು. [QBR]
ಕೀರ್ತನೆಗಳು 35 : 25 (IRVKN)
ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು; [QBR] [† ಅಥವಾ ಅವನನ್ನು ನುಂಗಿಬಿಟ್ಟಿದ್ದೇವೆಂದು.] ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು. [QBR]
ಕೀರ್ತನೆಗಳು 35 : 26 (IRVKN)
ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; [QBR] ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, [QBR] ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ. [QBR]
ಕೀರ್ತನೆಗಳು 35 : 27 (IRVKN)
ನನ್ನ ನ್ಯಾಯಸ್ಥಾಪನೆಯನ್ನು ಬಯಸುವವರು [QBR] ಆನಂದದೊಡನೆ ಜಯಧ್ವನಿಮಾಡಲಿ; [QBR] ತನ್ನ ಸೇವಕನ ಹಿತವನ್ನು ಕೋರುವ ಯೆಹೋವನಿಗೆ ಸ್ತೋತ್ರ ಎಂದು ಯಾವಾಗಲೂ ಹೇಳುವವರಾಗಲಿ. [QBR]
ಕೀರ್ತನೆಗಳು 35 : 28 (IRVKN)
ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವುದು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28

BG:

Opacity:

Color:


Size:


Font: