ಕೀರ್ತನೆಗಳು 36 : 1 (IRVKN)
ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ [QBR] ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ. [QBR]
ಕೀರ್ತನೆಗಳು 36 : 2 (IRVKN)
ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು [QBR] ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ. [QBR]
ಕೀರ್ತನೆಗಳು 36 : 3 (IRVKN)
ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; [QBR] ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ. [QBR]
ಕೀರ್ತನೆಗಳು 36 : 4 (IRVKN)
ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; [QBR] ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ. [QBR]
ಕೀರ್ತನೆಗಳು 36 : 5 (IRVKN)
ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; [QBR] ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ. [QBR]
ಕೀರ್ತನೆಗಳು 36 : 6 (IRVKN)
ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, [QBR] ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; [QBR] ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ. [QBR]
ಕೀರ್ತನೆಗಳು 36 : 7 (IRVKN)
ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; [QBR] ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ. [QBR]
ಕೀರ್ತನೆಗಳು 36 : 8 (IRVKN)
ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; [QBR] ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ. [QBR]
ಕೀರ್ತನೆಗಳು 36 : 9 (IRVKN)
ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; [QBR] ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ. [QBR]
ಕೀರ್ತನೆಗಳು 36 : 10 (IRVKN)
ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; [QBR] ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು. [QBR]
ಕೀರ್ತನೆಗಳು 36 : 11 (IRVKN)
ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಿಸಬೇಡ; [QBR] ದುರ್ಜನರಿಂದ ನಾವು ದೇಶಭ್ರಷ್ಟರಾಗದಂತೆ ಮಾಡು. [QBR]
ಕೀರ್ತನೆಗಳು 36 : 12 (IRVKN)
ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ. [PE]

1 2 3 4 5 6 7 8 9 10 11 12

BG:

Opacity:

Color:


Size:


Font: