ಕೀರ್ತನೆಗಳು 37 : 1 (IRVKN)
ಸದ್ಭಕ್ತರು ನಂಬಿಕೆಯಿಂದಲೇ ಜೀವಿಸಬೇಕೆಂದು ಬೋಧಿಸುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ *ದಾವೀದನ ಕೀರ್ತನೆ.
ಕೀರ್ತ 39; 73 *
ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ; ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ.
ಕೀರ್ತನೆಗಳು 37 : 2 (IRVKN)
ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು; ಹಸಿರು ಸಸಿಯಂತೆ ಬಾಡಿಹೋಗುವರು.
ಕೀರ್ತನೆಗಳು 37 : 3 (IRVKN)
ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.
ಕೀರ್ತನೆಗಳು 37 : 4 (IRVKN)
ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.
ಕೀರ್ತನೆಗಳು 37 : 5 (IRVKN)
ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.
ಕೀರ್ತನೆಗಳು 37 : 6 (IRVKN)
ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ, ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.
ಕೀರ್ತನೆಗಳು 37 : 7 (IRVKN)
ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.
ಕೀರ್ತನೆಗಳು 37 : 8 (IRVKN)
ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.
ಕೀರ್ತನೆಗಳು 37 : 9 (IRVKN)
ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.
ಕೀರ್ತನೆಗಳು 37 : 10 (IRVKN)
ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ.
ಕೀರ್ತನೆಗಳು 37 : 11 (IRVKN)
ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು.
ಕೀರ್ತನೆಗಳು 37 : 12 (IRVKN)
ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.
ಕೀರ್ತನೆಗಳು 37 : 13 (IRVKN)
ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.
ಕೀರ್ತನೆಗಳು 37 : 14 (IRVKN)
ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.
ಕೀರ್ತನೆಗಳು 37 : 15 (IRVKN)
ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು;
ಕೀರ್ತನೆಗಳು 37 : 16 (IRVKN)
ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.
ಕೀರ್ತನೆಗಳು 37 : 17 (IRVKN)
ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.
ಕೀರ್ತನೆಗಳು 37 : 18 (IRVKN)
ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.
ಕೀರ್ತನೆಗಳು 37 : 19 (IRVKN)
ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.
ಕೀರ್ತನೆಗಳು 37 : 20 (IRVKN)
ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು.
ಕೀರ್ತನೆಗಳು 37 : 21 (IRVKN)
ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.
ಕೀರ್ತನೆಗಳು 37 : 22 (IRVKN)
ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.
ಕೀರ್ತನೆಗಳು 37 : 23 (IRVKN)
ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.
ಕೀರ್ತನೆಗಳು 37 : 24 (IRVKN)
ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು.
ಕೀರ್ತನೆಗಳು 37 : 25 (IRVKN)
ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.
ಕೀರ್ತನೆಗಳು 37 : 26 (IRVKN)
ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ; ಅವನ ಸಂತತಿಯವರು ಆಶೀರ್ವಾದ ಹೊಂದುವರು.
ಕೀರ್ತನೆಗಳು 37 : 27 (IRVKN)
ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ.
ಕೀರ್ತನೆಗಳು 37 : 28 (IRVKN)
ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.
ಕೀರ್ತನೆಗಳು 37 : 29 (IRVKN)
ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, ಅದರಲ್ಲಿ ಶಾಶ್ವತವಾಗಿ ವಾಸಿಸುವರು.
ಕೀರ್ತನೆಗಳು 37 : 30 (IRVKN)
ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.
ಕೀರ್ತನೆಗಳು 37 : 31 (IRVKN)
ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವುದು; ಅವನು ಜಾರುವುದೇ ಇಲ್ಲ.
ಕೀರ್ತನೆಗಳು 37 : 32 (IRVKN)
ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.
ಕೀರ್ತನೆಗಳು 37 : 33 (IRVKN)
ಆದರೆ ಯೆಹೋವನು ಅವನನ್ನು ಅವರ ಕೈಗೆ ಸಿಕ್ಕಗೊಡಿಸುವುದಿಲ್ಲ; ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವುದಿಲ್ಲ.
ಕೀರ್ತನೆಗಳು 37 : 34 (IRVKN)
ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.
ಕೀರ್ತನೆಗಳು 37 : 35 (IRVKN)
ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ * ಹಸಿರಾಗಿ ಬೆಳೆದ ಮರದಂತೆ ಅಂದರೆ ಲೆಬನೋನ್ ದೇಶದ ದೇವದಾರಿನಂತೆ. ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.
ಕೀರ್ತನೆಗಳು 37 : 36 (IRVKN)
ತರುವಾಯ ಅಥವಾ ಅವನು. ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ, ಅವನು ಇಲ್ಲದೆ ಹೋಗಿದ್ದನು, ಅವನನ್ನು ಹುಡುಕಿದರೂ ಸಿಕ್ಕಲಿಲ್ಲ.
ಕೀರ್ತನೆಗಳು 37 : 37 (IRVKN)
ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು.
ಕೀರ್ತನೆಗಳು 37 : 38 (IRVKN)
ದ್ರೋಹಿಗಳೆಲ್ಲರೂ ನಾಶವಾಗುವರು; ದುಷ್ಟರ ಸಂತಾನವು ತೆಗೆದುಹಾಕಲ್ಪಡುವುದು.
ಕೀರ್ತನೆಗಳು 37 : 39 (IRVKN)
ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.
ಕೀರ್ತನೆಗಳು 37 : 40 (IRVKN)
ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು; ಅವರು ಆತನ ಆಶ್ರಿತರಾದುದರಿಂದ, ಆತನು ಅವರನ್ನು ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40