ಕೀರ್ತನೆಗಳು 40 : 1 (IRVKN)
ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; [QBR] ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು. [QBR]
ಕೀರ್ತನೆಗಳು 40 : 2 (IRVKN)
ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; [QBR] ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ, [QBR] ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು. [QBR]
ಕೀರ್ತನೆಗಳು 40 : 3 (IRVKN)
ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; [QBR] ಅದು ನಮ್ಮ ದೇವರ ಸ್ತೋತ್ರವೇ. [QBR] ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು [QBR] ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು. [QBR]
ಕೀರ್ತನೆಗಳು 40 : 4 (IRVKN)
ಯಾರು [* ಅಥವಾ ವಿಗ್ರಹಗಳ.] ಅಹಂಕಾರಿಗಳ ಜೊತೆಯಲ್ಲಿಯೂ, [QBR] ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ, [QBR] ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು. [QBR]
ಕೀರ್ತನೆಗಳು 40 : 5 (IRVKN)
ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? [QBR] ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, [QBR] ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; [QBR] ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; [QBR] ಅವು ಅಸಂಖ್ಯಾತವಾಗಿವೆ. [QBR]
ಕೀರ್ತನೆಗಳು 40 : 6 (IRVKN)
ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; [QBR] ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. [QBR] ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ. [QBR]
ಕೀರ್ತನೆಗಳು 40 : 7 (IRVKN)
ಆಗ ನಾನು, “ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ. [QBR]
ಕೀರ್ತನೆಗಳು 40 : 8 (IRVKN)
ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; [QBR] ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು. [QBR]
ಕೀರ್ತನೆಗಳು 40 : 9 (IRVKN)
ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, [QBR] ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; [QBR] ಯೆಹೋವನೇ, ನೀನೇ ಬಲ್ಲೆ. [QBR]
ಕೀರ್ತನೆಗಳು 40 : 10 (IRVKN)
ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ; [QBR] ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; [QBR] ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ. [QBR]
ಕೀರ್ತನೆಗಳು 40 : 11 (IRVKN)
ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ; [QBR] ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ. [QBR]
ಕೀರ್ತನೆಗಳು 40 : 12 (IRVKN)
ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; [QBR] ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, [QBR] ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ, [QBR] ನಾನು ಎದೆಗುಂದಿ ಹೋದೆನು. [QBR]
ಕೀರ್ತನೆಗಳು 40 : 13 (IRVKN)
ಯೆಹೋವನೇ, ದಯವಿಟ್ಟು ನನ್ನನ್ನು ರಕ್ಷಿಸು; [QBR] ಯೆಹೋವನೇ, ಬೇಗನೆ ಬಂದು ಸಹಾಯಮಾಡು. [QBR]
ಕೀರ್ತನೆಗಳು 40 : 14 (IRVKN)
ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, [QBR] ಆಶಾಭಂಗಪಟ್ಟು ಅವಮಾನಹೊಂದಲಿ; [QBR] ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ. [QBR]
ಕೀರ್ತನೆಗಳು 40 : 15 (IRVKN)
ಆಹಾ, ಆಹಾ ಎಂದು ನನ್ನನ್ನು ಪರಿಹಾಸ್ಯಮಾಡುವವರು, [QBR] ತಮಗೆ ಆಗುವ ಅವಮಾನದಿಂದ ವಿಸ್ಮಯಗೊಳ್ಳಲಿ. [QBR]
ಕೀರ್ತನೆಗಳು 40 : 16 (IRVKN)
ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; [QBR] ನಿನ್ನ ಜಯದಲ್ಲಿ ಆನಂದಿಸುವವರು, “ಯೆಹೋವನು ಮಹೋನ್ನತನು” ಎಂದು ಯಾವಾಗಲೂ ಹೇಳುವವರಾಗಲಿ. [QBR]
ಕೀರ್ತನೆಗಳು 40 : 17 (IRVKN)
ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; [QBR] ಕರ್ತನೇ ನನ್ನ ಹಿತಚಿಂತಕನು. [QBR] ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; [QBR] ತಡಮಾಡಬೇಡ. [PE]
❮
❯