ಕೀರ್ತನೆಗಳು 41 : 1 (IRVKN)
ರೋಗ ಮತ್ತು ಶತ್ರುಬಾಧಿತನ ಮೊರೆ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. *ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.
ಕೀರ್ತನೆಗಳು 41 : 2 (IRVKN)
ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!
ಕೀರ್ತನೆಗಳು 41 : 3 (IRVKN)
ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ, ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ.
ಕೀರ್ತನೆಗಳು 41 : 4 (IRVKN)
ನಾನಂತೂ, “ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕರುಣಿಸಿ ಸ್ವಸ್ಥಮಾಡು” ಅಂದೆನು.
ಕೀರ್ತನೆಗಳು 41 : 5 (IRVKN)
ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, “ಅವನು ಯಾವಾಗ ಸತ್ತಾನು? ಅವನ ಹೆಸರು ಯಾವಾಗ ಇಲ್ಲದೆ ಹೋದೀತು?” ಎಂದು ಹೇಳಿಕೊಳ್ಳುತ್ತಾರೆ.
ಕೀರ್ತನೆಗಳು 41 : 6 (IRVKN)
ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು; ಮನಸ್ಸಿನಲ್ಲಿ ಕುಯುಕ್ತಿಗಳನ್ನು ಕಲ್ಪಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ.
ಕೀರ್ತನೆಗಳು 41 : 7 (IRVKN)
ನನ್ನ ಹಗೆಯವರೆಲ್ಲರು ನನಗೆ ವಿರುದ್ಧವಾಗಿ ಕಿವಿಗಳಲ್ಲಿ ಗುಜುಗುಜು ಮಾತನಾಡಿಕೊಳ್ಳುತ್ತಾರೆ; * ಅಥವಾ ನನಗೆ ಕೇಡನ್ನು ಕಲ್ಪಿಸುತ್ತಾರೆ. ನನಗೆ ಕೇಡುಮಾಡಲು ಪರಸ್ಪರ ಆಲೋಚಿಸುತ್ತಾರೆ.
ಕೀರ್ತನೆಗಳು 41 : 8 (IRVKN)
“ಅವನನ್ನು ಅಸಾಧ್ಯರೋಗ ಹಿಡಿದಿದೆ; ಅವನು ಹಾಸಿಗೆಯನ್ನು ಬಿಟ್ಟು ತಿರುಗಿ ಏಳುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.
ಕೀರ್ತನೆಗಳು 41 : 9 (IRVKN)
ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.
ಕೀರ್ತನೆಗಳು 41 : 10 (IRVKN)
ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳುವಂತೆ ಮಾಡು; ಆಗ ನಾನು ಅವರಿಗೆ ಮುಯ್ಯಿತೀರಿಸುವೆನು.
ಕೀರ್ತನೆಗಳು 41 : 11 (IRVKN)
ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು.
ಕೀರ್ತನೆಗಳು 41 : 12 (IRVKN)
ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ, ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ.
ಕೀರ್ತನೆಗಳು 41 : 13 (IRVKN)
ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.

1 2 3 4 5 6 7 8 9 10 11 12 13