ದೇವರೇ, ನ್ಯಾಯವನ್ನು ತೀರಿಸು; [QBR] ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, [QBR] ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು. [QBR]
ಕೀರ್ತನೆಗಳು 43 : 2 (IRVKN)
ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ; [QBR] ಏಕೆ ನನ್ನನ್ನು ತಳ್ಳಿಬಿಟ್ಟೆ? [QBR] ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು? [QBR]
ಕೀರ್ತನೆಗಳು 43 : 3 (IRVKN)
ನಿನ್ನ ಬೆಳಕನ್ನು, ನಿನ್ನ ಸತ್ಯಪ್ರಸನ್ನತೆಗಳನ್ನು ಕಳುಹಿಸು; [QBR] ಅವು ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ. [QBR]
ಕೀರ್ತನೆಗಳು 43 : 4 (IRVKN)
ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, [QBR] ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ, [QBR] ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. [QBR]
ಕೀರ್ತನೆಗಳು 43 : 5 (IRVKN)
ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? [QBR] ದೇವರನ್ನು ನಿರೀಕ್ಷಿಸು; [QBR] ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; [QBR] ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು. [PE]