ಕೀರ್ತನೆಗಳು 44 : 1 (IRVKN)
ನಿರಂತರ ರಕ್ಷಣೆಗಾಗಿ ಪ್ರಾರ್ಥನೆ *1 ಪ್ರಧಾನಗಾಯಕನ ಕೀರ್ತನಸಂಹಗ್ರದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ.
ಕೀರ್ತ 79 *ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ, ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು.
ಕೀರ್ತನೆಗಳು 44 : 2 (IRVKN)
ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.
ಕೀರ್ತನೆಗಳು 44 : 3 (IRVKN)
ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು; ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ.
ಕೀರ್ತನೆಗಳು 44 : 4 (IRVKN)
* ಅಥವಾ ನೀನೇ ನನ್ನ ಅರಸನು, ಓ ದೇವರೇ, ಯಾಕೋಬನಿಗೆ ಜಯವನ್ನು ಆಜ್ಞಾಪಿಸು. ದೇವರೇ, ನೀನೇ ನನ್ನ ಅರಸನು; ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು.
ಕೀರ್ತನೆಗಳು 44 : 5 (IRVKN)
ನಿನ್ನ ಸಹಾಯದಿಂದಲೇ ವೈರಿಗಳನ್ನು ಕೆಡವಿಬಿಡುವೆವು; ನಿನ್ನ ನಾಮಧೇಯದ ಬಲದಿಂದ ಎದುರಾಳಿಗಳನ್ನು ತುಳಿದುಬಿಡುವೆವು.
ಕೀರ್ತನೆಗಳು 44 : 6 (IRVKN)
ನಾನು ನನ್ನ ಬಿಲ್ಲಿನಲ್ಲಿ ಭರವಸವಿಡುವುದಿಲ್ಲ; ಇಲ್ಲವೇ ನನ್ನ ಕತ್ತಿಯು ನನ್ನನ್ನು ರಕ್ಷಿಸಲಾರದು.
ಕೀರ್ತನೆಗಳು 44 : 7 (IRVKN)
ಹಿಂಸಕರಿಂದ ಬಿಡಿಸಿದವನು ನೀನೇ; ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಾತನು ನೀನೇ.
ಕೀರ್ತನೆಗಳು 44 : 8 (IRVKN)
ದೇವರೇ, ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ; ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು.
ಕೀರ್ತನೆಗಳು 44 : 9 (IRVKN)
ಆದರೆ ಈಗ ನೀನು ನಮ್ಮನು ಕೈಬಿಟ್ಟಿದ್ದೀ, ಅವಮಾನಪಡಿಸಿದಿ; ನಮ್ಮ ಸೈನ್ಯಗಳ ಸಂಗಡ ನೀನು ಹೋಗಲಿಲ್ಲ.
ಕೀರ್ತನೆಗಳು 44 : 10 (IRVKN)
ನಾವು ಹಗೆಗಳಿಗೆ ಬೆನ್ನುಕೊಟ್ಟು ಓಡಿಹೋಗುವಂತೆ ಮಾಡಿದಿ; ನಮ್ಮ ವೈರಿಗಳು ತಮಗೋಸ್ಕರ ಬೇಕಾದ ಹಾಗೆ ಕೊಳ್ಳೆಹೊಡೆಯುತ್ತಾರೆ.
ಕೀರ್ತನೆಗಳು 44 : 11 (IRVKN)
ತಿನ್ನತಕ್ಕ ಕುರಿಗಳನ್ನೋ ಎಂಬಂತೆ ನಮ್ಮನ್ನು ವಂಚಕರಿಗೆ ಒಪ್ಪಿಸಿದಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀ.
ಕೀರ್ತನೆಗಳು 44 : 12 (IRVKN)
ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ, ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ.
ಕೀರ್ತನೆಗಳು 44 : 13 (IRVKN)
ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದಿ; ಸುತ್ತಣ ಜನಾಂಗಗಳವರ ಪರಿಹಾಸ್ಯಕ್ಕೂ, ಕುಚೋದ್ಯಕ್ಕೂ ಒಳಪಡಿಸಿದಿ.
ಕೀರ್ತನೆಗಳು 44 : 14 (IRVKN)
ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದಮಾಡಿದಿ; ಅವರು ನಮ್ಮನ್ನು ನೋಡಿ ತಲೆಯಾಡಿಸುತ್ತಾರೆ.
ಕೀರ್ತನೆಗಳು 44 : 15 (IRVKN)
ದೂಷಕರ ನಿಂದಾವಚನಗಳಿಂದಲೂ, ಮುಯ್ಯಿತೀರಿಸುವ ವೈರಿಗಳ ದೃಷ್ಟಿಯಿಂದಲೂ,
ಕೀರ್ತನೆಗಳು 44 : 16 (IRVKN)
ನನಗೆ ಉಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೆ ಇದೆ; ನಾಚಿಕೆಯು ನನ್ನ ಮುಖವನ್ನು ಮುಚ್ಚಿದೆ.
ಕೀರ್ತನೆಗಳು 44 : 17 (IRVKN)
ನಾವು ನಿನ್ನನ್ನು ಮರೆಯದೆಯೂ, ನಿನ್ನ ನಿಬಂಧನೆಗಳನ್ನು ಮೀರದೆಯೂ ಇದ್ದರೂ; ಇದೆಲ್ಲಾ ನಮ್ಮ ಮೇಲೆ ಬಂದಿದೆಯಲ್ಲಾ!
ಕೀರ್ತನೆಗಳು 44 : 18 (IRVKN)
ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ದಾರಿಯಿಂದ ತೊಲಗಲಿಲ್ಲ.
ಕೀರ್ತನೆಗಳು 44 : 19 (IRVKN)
ಆದರೂ ನೀನು ನಮ್ಮನ್ನು ಅಪಜಯಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಮರಣದ ನೆರಳು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?
ಕೀರ್ತನೆಗಳು 44 : 20 (IRVKN)
ನಾವು ನಮ್ಮ ದೇವರ ಹೆಸರನ್ನು ಮರೆತು, ಅನ್ಯದೇವತೆಗಳಿಗೆ ಕೈಯೆತ್ತಿದ್ದರೆ,
ಕೀರ್ತನೆಗಳು 44 : 21 (IRVKN)
ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ?
ಕೀರ್ತನೆಗಳು 44 : 22 (IRVKN)
ದೇವರೇ, ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ.
ಕೀರ್ತನೆಗಳು 44 : 23 (IRVKN)
ಕರ್ತನೇ, ಏಕೆ ನಿದ್ರಿಸುತ್ತೀ? ಎಚ್ಚರವಾಗು; ಏಳು, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡ.
ಕೀರ್ತನೆಗಳು 44 : 24 (IRVKN)
ಏಕೆ ವಿಮುಖನಾಗಿದ್ದಿ? ನಮಗಿರುವ ಬಾಧೆಗಳನ್ನೂ, ಹಿಂಸೆಗಳನ್ನೂ ಏಕೆ ಲಕ್ಷಿಸುವುದಿಲ್ಲ?
ಕೀರ್ತನೆಗಳು 44 : 25 (IRVKN)
ನಮ್ಮ ಪ್ರಾಣವು ಧೂಳಿನವರೆಗೂ ಬಗ್ಗಿಹೋಗಿದೆ; ನಮ್ಮ ಶರೀರವು ನೆಲಕ್ಕೆ ಅಂಟಿಕೊಂಡಿದೆ.
ಕೀರ್ತನೆಗಳು 44 : 26 (IRVKN)
ಎದ್ದು ಬಂದು ಸಹಾಯಮಾಡು; ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಗಾಗಿ ನಮ್ಮನ್ನು ವಿಮೋಚಿಸು.
❮
❯