ಕೀರ್ತನೆಗಳು 46 : 1 (IRVKN)
ಯೆಹೋವನು ಭಕ್ತಪಾಲಕನೂ, ಸರ್ವಾಧಿಪತಿಯೂ ಎಂಬುದು *1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು.
ಕೀರ್ತ 76; 1ಪೂರ್ವ 15:20 *
ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಕೀರ್ತನೆಗಳು 46 : 2 (IRVKN)
ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ.
ಕೀರ್ತನೆಗಳು 46 : 3 (IRVKN)
ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? QSS ಸೆಲಾ SE
ಕೀರ್ತನೆಗಳು 46 : 4 (IRVKN)
ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ.
ಕೀರ್ತನೆಗಳು 46 : 5 (IRVKN)
ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.
ಕೀರ್ತನೆಗಳು 46 : 6 (IRVKN)
ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.
ಕೀರ್ತನೆಗಳು 46 : 7 (IRVKN)
ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. QSS ಸೆಲಾ SE
ಕೀರ್ತನೆಗಳು 46 : 8 (IRVKN)
ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ.
ಕೀರ್ತನೆಗಳು 46 : 9 (IRVKN)
ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; * ಅಥವಾ ಗುರಾಣಿಗಳನ್ನು. ಪ್ರಾಚೀನ ಗುರಾಣಿಗಳನ್ನು ಮರದಿಂದ ಮತ್ತು ಚರ್ಮದಿಂದ ತಯಾರಿಸಲಾಗುತ್ತಿತ್ತು ಮತ್ತು ಸಾಮಾನ್ಯವಾಗಿ ಆಲಿವ್ ಎಣ್ಣೆಯನ್ನು ಉಜ್ಜಲಾಗುತ್ತಿತ್ತು; ಇದರ ಪರಿಣಾಮವಾಗಿ ಅವುಗಳನ್ನು ಸುಲಭವಾಗಿ ದಹಿಸಬಹುದಾಗಿತ್ತು. ರಥಗಳನ್ನು ದಹಿಸಿಬಿಟ್ಟಿದ್ದಾನೆ.
ಕೀರ್ತನೆಗಳು 46 : 10 (IRVKN)
ಅಥವಾ ಮೌನವಾಗಿರಿ. ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.
ಕೀರ್ತನೆಗಳು 46 : 11 (IRVKN)
ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. QSS ಸೆಲಾ. SE

1 2 3 4 5 6 7 8 9 10 11