ಕೀರ್ತನೆಗಳು 47 : 1 (IRVKN)
ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; [QBR] ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ. [QBR]
ಕೀರ್ತನೆಗಳು 47 : 2 (IRVKN)
ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; [QBR] ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ. [QBR]
ಕೀರ್ತನೆಗಳು 47 : 3 (IRVKN)
ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, [QBR] ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ. [QBR]
ಕೀರ್ತನೆಗಳು 47 : 4 (IRVKN)
ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, [QBR] ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. ಸೆಲಾ
ಕೀರ್ತನೆಗಳು 47 : 5 (IRVKN)
ದೇವರು ಜಯಘೋಷದಿಂದ ಏರಿದ್ದಾನೆ; [QBR] ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ. [QBR]
ಕೀರ್ತನೆಗಳು 47 : 6 (IRVKN)
ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; [QBR] ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ. [QBR]
ಕೀರ್ತನೆಗಳು 47 : 7 (IRVKN)
ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; [QBR] ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ. [QBR]
ಕೀರ್ತನೆಗಳು 47 : 8 (IRVKN)
ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; [QBR] ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ. [QBR]
ಕೀರ್ತನೆಗಳು 47 : 9 (IRVKN)
ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ [QBR] ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; [QBR] ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. [QBR] ಆತನೇ ಸರ್ವೋನ್ನತನು. [PE]

1 2 3 4 5 6 7 8 9

BG:

Opacity:

Color:


Size:


Font: