ಕೀರ್ತನೆಗಳು 47 : 1 (IRVKN)
ಸಾರ್ವಭೌಮನಾದ ಯೆಹೋವನು ಸಿಂಹಾಸನಾರೂಢನಾಗಿರುವುದು *ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ.
ಕೀರ್ತ 93; 95-100 *
ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.
ಕೀರ್ತನೆಗಳು 47 : 2 (IRVKN)
ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.
ಕೀರ್ತನೆಗಳು 47 : 3 (IRVKN)
ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.
ಕೀರ್ತನೆಗಳು 47 : 4 (IRVKN)
ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. QSS ಸೆಲಾ SE
ಕೀರ್ತನೆಗಳು 47 : 5 (IRVKN)
ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.
ಕೀರ್ತನೆಗಳು 47 : 6 (IRVKN)
ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ.
ಕೀರ್ತನೆಗಳು 47 : 7 (IRVKN)
ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.
ಕೀರ್ತನೆಗಳು 47 : 8 (IRVKN)
ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ.
ಕೀರ್ತನೆಗಳು 47 : 9 (IRVKN)
ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.

1 2 3 4 5 6 7 8 9