ಕೀರ್ತನೆಗಳು 48 : 1 (IRVKN)
ಚೀಯೋನನ್ನು ರಕ್ಷಿಸಿದ್ದಕ್ಕಾಗಿ ಯೆಹೋವನನ್ನು ಕೊಂಡಾಡುವುದು *ಹಾಡು; ಕೋರಹೀಯರ ಕೀರ್ತನೆ.
ಕೀರ್ತ 46 *
ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.
ಕೀರ್ತನೆಗಳು 48 : 2 (IRVKN)
ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು.
ಕೀರ್ತನೆಗಳು 48 : 3 (IRVKN)
ದೇವರು ಅದರ ಕೊತ್ತಲುಗಳಲ್ಲಿ, ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು.
ಕೀರ್ತನೆಗಳು 48 : 4 (IRVKN)
ರಾಜರು ಕೂಡಿಕೊಂಡರು; ಅವರು ಒಗ್ಗಟ್ಟಾಗಿ ಬಂದರು.
ಕೀರ್ತನೆಗಳು 48 : 5 (IRVKN)
ನೋಡಿ ಬೆರಗಾದರು; ತಲ್ಲಣಿಸಿ ಓಡಿಹೋದರು.
ಕೀರ್ತನೆಗಳು 48 : 6 (IRVKN)
ಕಂಪನವೂ ಹೆರುವವಳಂತೆ, ವೇದನೆಯೂ ಅವರಿಗೆ ಉಂಟಾಯಿತು.
ಕೀರ್ತನೆಗಳು 48 : 7 (IRVKN)
ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.
ಕೀರ್ತನೆಗಳು 48 : 8 (IRVKN)
ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. QSS ಸೆಲಾ SE
ಕೀರ್ತನೆಗಳು 48 : 9 (IRVKN)
ದೇವರೇ, ನಾವು ನಿನ್ನ ಆಲಯದಲ್ಲಿ, ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ;
ಕೀರ್ತನೆಗಳು 48 : 10 (IRVKN)
ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ, ಲೋಕವೆಲ್ಲಾ ನಿನ್ನನ್ನು ಹೊಗಳುವುದು. ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು.
ಕೀರ್ತನೆಗಳು 48 : 11 (IRVKN)
ಚೀಯೋನ್ ಪಟ್ಟಣದವರು* ಚೀಯೋನ್ ಪಟ್ಟಣದವರು ಮೂಲತಃ ಚೀಯೋನ್ ಪುತ್ರಿಯರು. ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ, ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ.
ಕೀರ್ತನೆಗಳು 48 : 12 (IRVKN)
ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ, ಅದರ ಬುರುಜುಗಳನ್ನು ಲೆಕ್ಕಿಸಿರಿ.
ಕೀರ್ತನೆಗಳು 48 : 13 (IRVKN)
ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ.
ಕೀರ್ತನೆಗಳು 48 : 14 (IRVKN)
ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.

1 2 3 4 5 6 7 8 9 10 11 12 13 14