ಕೀರ್ತನೆಗಳು 49 : 1 (IRVKN)
ಐಶ್ವರ್ಯ ವ್ಯರ್ಥ; ಮರಣ ನಿಶ್ಚಯ; ಸದ್ಭಕ್ತರಿಗೆ ನಿರೀಕ್ಷೆಯುಂಟು *ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ.
ಕೀರ್ತ 73 *ಸಕಲ ದೇಶಗಳ ಜನರೇ, ಕೇಳಿರಿ; ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ.
ಕೀರ್ತನೆಗಳು 49 : 2 (IRVKN)
ಜನರೇ, ಜನಾಧಿಪತಿಗಳೇ, ಬಡವರೇ ಮತ್ತು ಐಶ್ವರ್ಯವಂತರೇ, ನೀವೆಲ್ಲರೂ ಒಂದಾಗಿ ಬಂದು ಆಲಿಸಿರಿ.
ಕೀರ್ತನೆಗಳು 49 : 3 (IRVKN)
ನನ್ನ ಬಾಯಿ ಸುಜ್ಞಾನವನ್ನು ಬೋಧಿಸುವುದು; ನನ್ನ ಹೃದಯದ ಧ್ಯಾನವು ವಿವೇಕದಿಂದ ಕೂಡಿದೆ.
ಕೀರ್ತನೆಗಳು 49 : 4 (IRVKN)
ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ, ಅದರ ಗೂಡಾರ್ಥವನ್ನು ಪ್ರಕಟಿಸುವೆನು.
ಕೀರ್ತನೆಗಳು 49 : 5 (IRVKN)
ಕೇಡಿನ ದಿನಗಳಲ್ಲಿ ಏಕೆ ಭಯಪಡಬೇಕು? ಶತ್ರುಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಏಕೆ ಹೆದರಬೇಕು?
ಕೀರ್ತನೆಗಳು 49 : 6 (IRVKN)
ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ.
ಕೀರ್ತನೆಗಳು 49 : 7 (IRVKN)
ಆದರೆ ಯಾರಾದರೂ ತನ್ನ ಸಹೋದರನು* ತನ್ನ ಸಹೋದರನು ಅಥವಾ ತನ್ನನ್ನು ತಾನು. ಸಮಾಧಿಯಲ್ಲಿ ಸೇರದಂತೆ, ದೇವರಿಗೆ ಈಡನ್ನು ಕೊಡಲಾರನು.
ಕೀರ್ತನೆಗಳು 49 : 8 (IRVKN)
ಅವನ ಪ್ರಾಣವು ಶಾಶ್ವತವಾಗಿ ಉಳಿಯಲು, ಅಪಾರ ಹಣವನ್ನು ಕೊಟ್ಟು ಬಿಡಿಸಲಾರನು.
ಕೀರ್ತನೆಗಳು 49 : 9 (IRVKN)
ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ, ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು.
ಕೀರ್ತನೆಗಳು 49 : 10 (IRVKN)
ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.
ಕೀರ್ತನೆಗಳು 49 : 11 (IRVKN)
ಅವರ ಸಮಾಧಿಯೇ† ಸಮಾಧಿಯೇ ಅಂದರೆ ಅವರ ಅಂತರಾಲೋಚನೆಗಳು. ಶಾಶ್ವತಮಂದಿರವು; ತಮ್ಮ ನಿವಾಸಗಳು ತಲತಲಾಂತರಕ್ಕೂ ಇರುವುದೆಂದು ಯೋಚಿಸಿ, ಭೂಮಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೆ.
ಕೀರ್ತನೆಗಳು 49 : 12 (IRVKN)
ಆದರೂ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಲ್ಲ; ನಾಶವಾಗುವ ಪಶುಗಳಂತೆಯೇ ಇಲ್ಲವಾಗುತ್ತಾನೆ.
ಕೀರ್ತನೆಗಳು 49 : 13 (IRVKN)
ಮೂರ್ಖರಿಗೂ ಅವರ ಮಾತಿನಂತೆ ನಡೆಯುವವರಿಗೂ ಇದೇ ಗತಿ. QSS ಸೆಲಾ SE
ಕೀರ್ತನೆಗಳು 49 : 14 (IRVKN)
ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ‡ ಅಥವಾ ಉದಯಕಾಲದಲ್ಲಿ ಯಥಾರ್ಥರು ಅವರ ಮೇಲೆ ದೊರೆತನ ನಡೆಸುವರು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು.
ಕೀರ್ತನೆಗಳು 49 : 15 (IRVKN)
ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ, ನನ್ನನ್ನು ಸ್ವೀಕಾರಮಾಡುವನು. QSS ಸೆಲಾ SE
ಕೀರ್ತನೆಗಳು 49 : 16 (IRVKN)
ಒಬ್ಬನ ಐಶ್ವರ್ಯವೂ, ಗೃಹವೈಭವವೂ§ ಗೃಹವೈಭವವೂ ಅಥವಾ ಗೃಹಸಂಪತ್ತು. ವೃದ್ಧಿಯಾದಾಗ ಕಳವಳಪಡಬೇಡ.
ಕೀರ್ತನೆಗಳು 49 : 17 (IRVKN)
ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗುವುದಿಲ್ಲ; ಅವನ ವೈಭವವು ಅವನೊಡನೆ ಹೋಗುವುದಿಲ್ಲ.
ಕೀರ್ತನೆಗಳು 49 : 18 (IRVKN)
ಸಿರಿ ಬಂದಾಗ ನೆರೆಯವರ ಹೊಗಳಿಕೆ ತಪ್ಪದು ಎಂಬಂತೆ, ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ, ಜನರಸ್ತುತಿಯಿಂದಲೂ ಕೂಡಿದವನಾದರೂ,
ಕೀರ್ತನೆಗಳು 49 : 19 (IRVKN)
ಪೂರ್ವಿಕರ ಬಳಿಗೆ ಸೇರಿ ಅವರಂತೆಯೇ, ಎಂದಿಗೂ ಬೆಳಕನ್ನು ನೋಡುವುದಿಲ್ಲ.
ಕೀರ್ತನೆಗಳು 49 : 20 (IRVKN)
ವಿವೇಕಹೀನ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ, ನಶಿಸಿ ಹೋಗುವ ಪಶುಗಳಿಗೆ ಸಮಾನವಾಗಿ ಇಲ್ಲವಾಗುತ್ತಾನೆ.
❮
❯
1
2
3
4
5
6
7
8
9
10
11
12
13
14
15
16
17
18
19
20