ಕೀರ್ತನೆಗಳು 5 : 1 (IRVKN)
ಭಕ್ತ ರಕ್ಷಕನಾದ ಯೆಹೋವನಿಗೆ ಉದಯಕೀರ್ತನೆ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ರಂಧ್ರವಾದ್ಯದೊಡನೆ ಹಾಡತಕ್ಕ ದಾವೀದನ ಕೀರ್ತನೆ. *ಯೆಹೋವನೇ ನನ್ನ ಮೊರೆಗೆ ಕಿವಿಗೊಡು; ನನ್ನ ನರಳಾಟವನ್ನು ಲಕ್ಷ್ಯಕ್ಕೆ ತಂದುಕೋ.
ಕೀರ್ತನೆಗಳು 5 : 2 (IRVKN)
ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು; ನನ್ನ ಮೊರೆಯನ್ನು ಆಲಿಸು.
ಕೀರ್ತನೆಗಳು 5 : 3 (IRVKN)
ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ * ಅಥವಾ ಯಜ್ಞವನ್ನು. ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.
ಕೀರ್ತನೆಗಳು 5 : 4 (IRVKN)
ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು.
ಕೀರ್ತನೆಗಳು 5 : 5 (IRVKN)
ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ.
ಕೀರ್ತನೆಗಳು 5 : 6 (IRVKN)
ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.
ಕೀರ್ತನೆಗಳು 5 : 7 (IRVKN)
ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.
ಕೀರ್ತನೆಗಳು 5 : 8 (IRVKN)
ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.
ಕೀರ್ತನೆಗಳು 5 : 9 (IRVKN)
ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.
ಕೀರ್ತನೆಗಳು 5 : 10 (IRVKN)
ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು; ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು.
ಕೀರ್ತನೆಗಳು 5 : 11 (IRVKN)
ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು.
ಕೀರ್ತನೆಗಳು 5 : 12 (IRVKN)
ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವುದು.

1 2 3 4 5 6 7 8 9 10 11 12