ಕೀರ್ತನೆಗಳು 50 : 1 (IRVKN)
ದೇವರು ಸದಾಚಾರವನ್ನೇ ಮೆಚ್ಚುವನು ಆಸಾಫನ ಕೀರ್ತನೆ. ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.
ಕೀರ್ತನೆಗಳು 50 : 2 (IRVKN)
ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ, ದೇವರು ಪ್ರಕಾಶಿಸುತ್ತಾನೆ.
ಕೀರ್ತನೆಗಳು 50 : 3 (IRVKN)
ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.
ಕೀರ್ತನೆಗಳು 50 : 4 (IRVKN)
ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು ಸಾಕ್ಷಿಗಳನ್ನಾಗಿ ನೇಮಿಸುತ್ತಾನೆ.
ಕೀರ್ತನೆಗಳು 50 : 5 (IRVKN)
“ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ.
ಕೀರ್ತನೆಗಳು 50 : 6 (IRVKN)
ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. QSS ಸೆಲಾ SE
ಕೀರ್ತನೆಗಳು 50 : 7 (IRVKN)
ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ.
ಕೀರ್ತನೆಗಳು 50 : 8 (IRVKN)
ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.
ಕೀರ್ತನೆಗಳು 50 : 9 (IRVKN)
ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ.
ಕೀರ್ತನೆಗಳು 50 : 10 (IRVKN)
ಕಾಡಿನಲ್ಲಿರುವ ಸರ್ವಮೃಗಗಳೂ, ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ.
ಕೀರ್ತನೆಗಳು 50 : 11 (IRVKN)
* ಅಥವಾ ಆಕಾಶದ. ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ; ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು.
ಕೀರ್ತನೆಗಳು 50 : 12 (IRVKN)
ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ; ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ.
ಕೀರ್ತನೆಗಳು 50 : 13 (IRVKN)
ನಾನು ಹೋರಿಗಳ ಮಾಂಸವನ್ನು ತಿನ್ನುವುದೂ, ಹೋತಗಳ ರಕ್ತವನ್ನು ಕುಡಿಯುವುದೂ ಉಂಟೇ?
ಕೀರ್ತನೆಗಳು 50 : 14 (IRVKN)
ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.
ಕೀರ್ತನೆಗಳು 50 : 15 (IRVKN)
ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.
ಕೀರ್ತನೆಗಳು 50 : 16 (IRVKN)
ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?
ಕೀರ್ತನೆಗಳು 50 : 17 (IRVKN)
ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.
ಕೀರ್ತನೆಗಳು 50 : 18 (IRVKN)
ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ.
ಕೀರ್ತನೆಗಳು 50 : 19 (IRVKN)
ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ; ನಾಲಿಗೆಯು ಮೋಸವನ್ನು ನೇಯುತ್ತದೆ.
ಕೀರ್ತನೆಗಳು 50 : 20 (IRVKN)
ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ; ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ.
ಕೀರ್ತನೆಗಳು 50 : 21 (IRVKN)
ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.
ಕೀರ್ತನೆಗಳು 50 : 22 (IRVKN)
ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.
ಕೀರ್ತನೆಗಳು 50 : 23 (IRVKN)
ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23