ಕೀರ್ತನೆಗಳು 50 : 1 (IRVKN)
ಬಲಿಷ್ಠ ದೇವರಾದ ಯೆಹೋವನು [QBR] ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, [QBR] ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ. [QBR]
ಕೀರ್ತನೆಗಳು 50 : 2 (IRVKN)
ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ, [QBR] ದೇವರು ಪ್ರಕಾಶಿಸುತ್ತಾನೆ. [QBR]
ಕೀರ್ತನೆಗಳು 50 : 3 (IRVKN)
ನಮ್ಮ ದೇವರು ಪ್ರತ್ಯಕ್ಷನಾಗುವನು, [QBR] ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; [QBR] ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; [QBR] ಆತನ ಸುತ್ತಲು ಬಿರುಗಾಳಿ ಬೀಸುತ್ತದೆ. [QBR]
ಕೀರ್ತನೆಗಳು 50 : 4 (IRVKN)
ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು [QBR] ಸಾಕ್ಷಿಗಳನ್ನಾಗಿ ನೇಮಿಸುತ್ತಾನೆ. [QBR]
ಕೀರ್ತನೆಗಳು 50 : 5 (IRVKN)
“ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು [QBR] ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ. [QBR]
ಕೀರ್ತನೆಗಳು 50 : 6 (IRVKN)
ದೇವರು ತಾನೇ ನ್ಯಾಯಾಧಿಪತಿ; [QBR] ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ
ಕೀರ್ತನೆಗಳು 50 : 7 (IRVKN)
ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, [QBR] ದೇವರಾದ ನಾನೇ ನಿಮ್ಮ ದೇವರು; [QBR] ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ. [QBR]
ಕೀರ್ತನೆಗಳು 50 : 8 (IRVKN)
ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; [QBR] ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ. [QBR]
ಕೀರ್ತನೆಗಳು 50 : 9 (IRVKN)
ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; [QBR] ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ. [QBR]
ಕೀರ್ತನೆಗಳು 50 : 10 (IRVKN)
ಕಾಡಿನಲ್ಲಿರುವ ಸರ್ವಮೃಗಗಳೂ, [QBR] ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ. [QBR]
ಕೀರ್ತನೆಗಳು 50 : 11 (IRVKN)
[* ಅಥವಾ ಆಕಾಶದ.] ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ; [QBR] ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು. [QBR]
ಕೀರ್ತನೆಗಳು 50 : 12 (IRVKN)
ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ; [QBR] ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ. [QBR]
ಕೀರ್ತನೆಗಳು 50 : 13 (IRVKN)
ನಾನು ಹೋರಿಗಳ ಮಾಂಸವನ್ನು ತಿನ್ನುವುದೂ, [QBR] ಹೋತಗಳ ರಕ್ತವನ್ನು ಕುಡಿಯುವುದೂ ಉಂಟೇ? [QBR]
ಕೀರ್ತನೆಗಳು 50 : 14 (IRVKN)
ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; [QBR] ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ. [QBR]
ಕೀರ್ತನೆಗಳು 50 : 15 (IRVKN)
ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; [QBR] ಆಗ ನನ್ನನ್ನು ಕೊಂಡಾಡುವಿರಿ. [QBR]
ಕೀರ್ತನೆಗಳು 50 : 16 (IRVKN)
ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, [QBR] “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? [QBR] ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ? [QBR]
ಕೀರ್ತನೆಗಳು 50 : 17 (IRVKN)
ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; [QBR] ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ. [QBR]
ಕೀರ್ತನೆಗಳು 50 : 18 (IRVKN)
ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; [QBR] ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ. [QBR]
ಕೀರ್ತನೆಗಳು 50 : 19 (IRVKN)
ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ; [QBR] ನಾಲಿಗೆಯು ಮೋಸವನ್ನು ನೇಯುತ್ತದೆ. [QBR]
ಕೀರ್ತನೆಗಳು 50 : 20 (IRVKN)
ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ; [QBR] ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ. [QBR]
ಕೀರ್ತನೆಗಳು 50 : 21 (IRVKN)
ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. [QBR] ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. [QBR] ಈಗಲಾದರೋ ನಾನು ಎಲ್ಲವನ್ನು, [QBR] ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು. [QBR]
ಕೀರ್ತನೆಗಳು 50 : 22 (IRVKN)
ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; [QBR] ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. [QBR] ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ. [QBR]
ಕೀರ್ತನೆಗಳು 50 : 23 (IRVKN)
ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; [QBR] ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.” [PE]

1 2 3 4 5 6 7 8 9 10 11 12 13 14 15 16 17 18 19 20 21 22 23

BG:

Opacity:

Color:


Size:


Font: