ಕೀರ್ತನೆಗಳು 52 : 1 (IRVKN)
ದುಷ್ಟಾಧಿಕಾರಿಯ ದುರ್ಸ್ವಭಾವದ ಖಂಡನೆ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಅಹೀಮೆಲೆಕನ ಮನೆಗೆ ಬಂದ ವರ್ತಮಾನವನ್ನು ಎದೋಮ್ಯನಾದ ದೋಯೇಗನು ಸೌಲನಿಗೆ ತಿಳಿಸಿದಾಗ ದಾವೀದನು ರಚಿಸಿದ ಪದ್ಯ. * * ಅಥವಾ ಓ ಪರಾಕ್ರಮಿಯೇ, ನೀನು ದೇವರ ಮನುಷ್ಯನಿಗೆ ಮಾಡಿದ ಕಾರ್ಯದ ಬಗ್ಗೆ ಹಿಗ್ಗುವದೇನು? ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು.
ಕೀರ್ತನೆಗಳು 52 : 2 (IRVKN)
ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.
ಕೀರ್ತನೆಗಳು 52 : 3 (IRVKN)
ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ; ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ. QSS ಸೆಲಾ SE
ಕೀರ್ತನೆಗಳು 52 : 4 (IRVKN)
ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ.
ಕೀರ್ತನೆಗಳು 52 : 5 (IRVKN)
ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.
ಕೀರ್ತನೆಗಳು 52 : 6 (IRVKN)
ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ,
ಕೀರ್ತನೆಗಳು 52 : 7 (IRVKN)
“ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, † ಅಥವಾ ತನ್ನ ದುಷ್ಟಕಾರ್ಯಗಳಲ್ಲಿ ಆಧಿಕ ಬಲಿಷ್ಠನಾಗುತ್ತಾ ಬಂದನು. ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು.
ಕೀರ್ತನೆಗಳು 52 : 8 (IRVKN)
ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.
ಕೀರ್ತನೆಗಳು 52 : 9 (IRVKN)
ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು.
❮
❯