ಕೀರ್ತನೆಗಳು 54 : 1 (IRVKN)
ವೈರಿಗಳಿಂದ ರಕ್ಷಿಸಬೇಕೆಂದು ಪ್ರಾರ್ಥಿಸುವುದು *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಜಿಫ್ಯರು ಸೌಲನ ಬಳಿಗೆ ಬಂದು ದಾವೀದನು ತಮ್ಮಲ್ಲೇ ಅಡಗಿಕೊಂಡಿದ್ದಾನೆಂದು ತಿಳಿಸಿದಾಗ ದಾವೀದನು ರಚಿಸಿದ ಪದ್ಯ. *ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು.
ಕೀರ್ತನೆಗಳು 54 : 2 (IRVKN)
ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮಾತುಗಳಿಗೆ ಕಿವಿಗೊಡು.
ಕೀರ್ತನೆಗಳು 54 : 3 (IRVKN)
* ಅಥವಾ ಅನ್ಯರು. ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವುದೇ ಇಲ್ಲ. QSS ಸೆಲಾ SE
ಕೀರ್ತನೆಗಳು 54 : 4 (IRVKN)
ಇಗೋ, ದೇವರೇ ನನಗೆ ಸಹಾಯಕನು; ಕೆಲವು ಹಸ್ತಪ್ರತಿಗಳಲ್ಲಿ ನನ್ನ ಪ್ರಾಣವನ್ನು ಕಾಪಾಡುವವರೊಂದಿಗೆ ಕರ್ತನು ಇದ್ದಾನೆ. ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು.
ಕೀರ್ತನೆಗಳು 54 : 5 (IRVKN)
ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ. ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು.
ಕೀರ್ತನೆಗಳು 54 : 6 (IRVKN)
ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.
ಕೀರ್ತನೆಗಳು 54 : 7 (IRVKN)
ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ, ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ.

1 2 3 4 5 6 7