ಕೀರ್ತನೆಗಳು 55 : 1 (IRVKN)
ದ್ರೋಹಿಗಳ ನಿರ್ಮೂಲಕ್ಕಾಗಿ ಪ್ರಾರ್ಥನೆ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಪದ್ಯ. *ದೇವರೇ, ನನ್ನ ಮೊರೆಯನ್ನು ಲಾಲಿಸು; ನನ್ನ ವಿಜ್ಞಾಪನೆಗೆ ಕಿವಿಮುಚ್ಚಿಕೊಳ್ಳಬೇಡ.
ಕೀರ್ತನೆಗಳು 55 : 2 (IRVKN)
ನನ್ನ ಕಡೆಗೆ ಲಕ್ಷ್ಯಕೊಟ್ಟು ಸದುತ್ತರವನ್ನು ದಯಪಾಲಿಸು.
ಕೀರ್ತನೆಗಳು 55 : 3 (IRVKN)
ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ, ಹೊಯ್ದಾಡುತ್ತಾ ನರಳುತ್ತಿದ್ದೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ, ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.
ಕೀರ್ತನೆಗಳು 55 : 4 (IRVKN)
ನನ್ನ ಹೃದಯವು ನೊಂದು ಬೆಂದುಹೋಗಿದೆ; ಮರಣಭಯವು ನನ್ನನ್ನು ಆವರಿಸಿಕೊಂಡಿದೆ.
ಕೀರ್ತನೆಗಳು 55 : 5 (IRVKN)
ಅಂಜಿ ನಡುಗುತ್ತಿದ್ದೇನೆ; ದಿಗಿಲು ನನ್ನನ್ನು ಹಿಡಿದಿದೆ.
ಕೀರ್ತನೆಗಳು 55 : 6 (IRVKN)
ನಾನು, “ಆಹಾ, ನನಗೆ ರೆಕ್ಕೆಗಳಿದ್ದರೆ ಪಾರಿವಾಳದಂತೆ ಹಾರಿಹೋಗಿ ಆಶ್ರಯ ಸೇರಿಕೊಳ್ಳುತ್ತಿದ್ದೆನು.
ಕೀರ್ತನೆಗಳು 55 : 7 (IRVKN)
ಅವಸರದಿಂದ ಹಾನಿಕರವಾದ ಬಿರುಗಾಳಿಯಿಂದ ತಪ್ಪಿಸಿಕೊಂಡು,
ಕೀರ್ತನೆಗಳು 55 : 8 (IRVKN)
ದೂರ ಹೋಗಿ ಅರಣ್ಯಸ್ಥಳದಲ್ಲಿ ಪ್ರವಾಸಿಯಾಗಿರುತ್ತಿದ್ದೆನು” ಅಂದುಕೊಂಡೆನು. QSS ಸೆಲಾ SE
ಕೀರ್ತನೆಗಳು 55 : 9 (IRVKN)
ಕರ್ತನೇ, ಅವರ ಭಾಷೆಯನ್ನು ತಾರುಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹ, ಬಲಾತ್ಕಾರಗಳು ಕಾಣಬರುತ್ತವೆ.
ಕೀರ್ತನೆಗಳು 55 : 10 (IRVKN)
ಅವೇ ಅದರ ಪೌಳಿಗೋಡೆಗಳ ಮೇಲೆ ಹಗಲಿರುಳು ಸುತ್ತುತ್ತಿರುವ ಕಾವಲುಗಾರರು; ಊರೊಳಗೆ ಕೇಡು, ತೊಂದರೆಗಳು ಪ್ರಬಲವಾಗಿವೆ.
ಕೀರ್ತನೆಗಳು 55 : 11 (IRVKN)
ಅದರೊಳಗೆಲ್ಲಾ ನಾಶನವೇ; ದಬ್ಬಾಳಿಕೆ ಮತ್ತು ವಂಚನೆ ಅದರ ಬೀದಿಗಳಿಂದ ತೊಲಗವು.
ಕೀರ್ತನೆಗಳು 55 : 12 (IRVKN)
ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು.
ಕೀರ್ತನೆಗಳು 55 : 13 (IRVKN)
ಆದರೆ ನೀನು ನನಗೆ ಸ್ವಕೀಯನೂ ಆಪ್ತಮಿತ್ರನೂ ಅಲ್ಲವೇ.
ಕೀರ್ತನೆಗಳು 55 : 14 (IRVKN)
ನಾವು ಪರಸ್ಪರವಾಗಿ ರಸಭರಿತ ಸಂಭಾಷಣೆ ಮಾಡುತ್ತಾ ಭಕ್ತಸಮೂಹದೊಡನೆ ದೇವಾಲಯಕ್ಕೆ ಹೋಗುತ್ತಿದ್ದೆವಲ್ಲಾ.
ಕೀರ್ತನೆಗಳು 55 : 15 (IRVKN)
ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.
ಕೀರ್ತನೆಗಳು 55 : 16 (IRVKN)
ನಾನಂತೂ ದೇವರಾದ ಯೆಹೋವನಿಗೆ ಮೊರೆಯಿಡುವೆನು; ಆತನು ನನ್ನನ್ನು ರಕ್ಷಿಸುವನು.
ಕೀರ್ತನೆಗಳು 55 : 17 (IRVKN)
ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು. ಆತನು ಹೇಗೂ ನನ್ನ ಮೊರೆಯನ್ನು ಕೇಳಿ
ಕೀರ್ತನೆಗಳು 55 : 18 (IRVKN)
ನನ್ನ ವಿರೋಧಿಗಳು ಅನೇಕರಿದ್ದರೂ ಅವರು ನನ್ನನ್ನು ಮುಟ್ಟದಂತೆ ಸುರಕ್ಷಿತವಾಗಿ ಇಡುವನು.
ಕೀರ್ತನೆಗಳು 55 : 19 (IRVKN)
ಅನಾದಿಕಾಲದಿಂದ ಆಸನಾರೂಢನಾಗಿರುವ ದೇವರು ಲಕ್ಷ್ಯವಿಟ್ಟು ಅವರನ್ನು ತಗ್ಗಿಸಿಬಿಡುವನು. QSS ಸೆಲಾ SE ಅವರು ತಮ್ಮ ಸುಖವು ಕದಲದೆಂದುಕೊಂಡು ದೇವರಿಗೆ ಹೆದರುವುದಿಲ್ಲ.
ಕೀರ್ತನೆಗಳು 55 : 20 (IRVKN)
ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.
ಕೀರ್ತನೆಗಳು 55 : 21 (IRVKN)
ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.
ಕೀರ್ತನೆಗಳು 55 : 22 (IRVKN)
ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.
ಕೀರ್ತನೆಗಳು 55 : 23 (IRVKN)
ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.

1 2 3 4 5 6 7 8 9 10 11 12 13 14 15 16 17 18 19 20 21 22 23