ಕೀರ್ತನೆಗಳು 56 : 1 (IRVKN)
ಶತ್ರುಪೀಡಿತರಾದ ಭಕ್ತರ ಪ್ರಾರ್ಥನೆ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೋನತ್ ಎಲೆಮ್ ರೆಹೋಕೀಮ್ ಎಂಬ ರಾಗ; ದಾವೀದನು ಗತ್ ಎಂಬ ಊರಲ್ಲಿ ಫಿಲಿಷ್ಟಿಯರ ಕೈವಶವಾದಾಗ ರಚಿಸಿದ ಕಾವ್ಯ. *ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ.
ಕೀರ್ತನೆಗಳು 56 : 2 (IRVKN)
ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ; ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು.
ಕೀರ್ತನೆಗಳು 56 : 3 (IRVKN)
ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು.
ಕೀರ್ತನೆಗಳು 56 : 4 (IRVKN)
ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು?
ಕೀರ್ತನೆಗಳು 56 : 5 (IRVKN)
ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ; ಅವರು ಬಗೆಯುವುದೆಲ್ಲ ನನಗೆ ಕೇಡೇ.
ಕೀರ್ತನೆಗಳು 56 : 6 (IRVKN)
ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ, ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ.
ಕೀರ್ತನೆಗಳು 56 : 7 (IRVKN)
ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ? ದೇವರೇ, ರೌದ್ರದಿಂದ ಆ ಜನಾಂಗಗಳನ್ನು ಉರುಳಿಸಿಬಿಡು.
ಕೀರ್ತನೆಗಳು 56 : 8 (IRVKN)
ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.
ಕೀರ್ತನೆಗಳು 56 : 9 (IRVKN)
ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; * ಅಥವಾ ನನಗೆ ಇದು ತಿಳಿದಿದೆ ಯಾಕೆಂದರೆ ದೇವರು ನನ್ನ ಕಡೆಯಲ್ಲಿದ್ದಾನೆ. ದೇವರು ನನ್ನ ಸಂಗಡ ಇರುವುದು ನಿಶ್ಚಯ.
ಕೀರ್ತನೆಗಳು 56 : 10 (IRVKN)
ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. ಯೆಹೋವನಲ್ಲಿ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ.
ಕೀರ್ತನೆಗಳು 56 : 11 (IRVKN)
ದೇವರನ್ನು ನಂಬಿ ನಿರ್ಭಯದಿಂದಿರುವೆನು; ನರಪ್ರಾಣಿಗಳು ನನಗೆ ಏನು ಮಾಡಾರು?
ಕೀರ್ತನೆಗಳು 56 : 12 (IRVKN)
ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.
ಕೀರ್ತನೆಗಳು 56 : 13 (IRVKN)
ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ.

1 2 3 4 5 6 7 8 9 10 11 12 13