ಕೀರ್ತನೆಗಳು 57 : 1 (IRVKN)
ಶತ್ರುಬಾಧಿತನಾದ ಸದ್ಭಕ್ತನ ವಿಜ್ಞಾಪನೆಯೂ ಸ್ತೋತ್ರವೂ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಅಲ್ತಷ್ಖೇತೆಂಬ ರಾಗ; ದಾವೀದನು ಸೌಲನ ಭೀತಿಯಿಂದ ಓಡಿಹೋಗಿ ಗುಹೆಯಲ್ಲಿ ಅಡಗಿಕೊಂಡಿದ್ದಾಗ ರಚಿಸಿದ ಕಾವ್ಯ. *ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
ಕೀರ್ತನೆಗಳು 57 : 2 (IRVKN)
ಪರಾತ್ಪರನಾದ ದೇವರಿಗೆ ಮೊರೆಯಿಡುವೆನು, ನನ್ನ ಕಾರ್ಯವನ್ನು ಸಫಲಮಾಡುವ ದೇವರನ್ನು ಕೂಗಿ ಕರೆಯುವೆನು.
ಕೀರ್ತನೆಗಳು 57 : 3 (IRVKN)
ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; QSS ಸೆಲಾ SE ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು.
ಕೀರ್ತನೆಗಳು 57 : 4 (IRVKN)
ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ* ದುರಾಶೆಯಿಂದ ಕಬಳಿಸುವಂತಹ ಅಥವಾ ಬೆಂಕಿಕಾರುವ. ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ.
ಕೀರ್ತನೆಗಳು 57 : 5 (IRVKN)
ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
ಕೀರ್ತನೆಗಳು 57 : 6 (IRVKN)
ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. QSS ಸೆಲಾ SE
ಕೀರ್ತನೆಗಳು 57 : 7 (IRVKN)
ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು.
ಕೀರ್ತನೆಗಳು 57 : 8 (IRVKN)
ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.
ಕೀರ್ತನೆಗಳು 57 : 9 (IRVKN)
ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.
ಕೀರ್ತನೆಗಳು 57 : 10 (IRVKN)
ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ, ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ.
ಕೀರ್ತನೆಗಳು 57 : 11 (IRVKN)
ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.

1 2 3 4 5 6 7 8 9 10 11