ಕೀರ್ತನೆಗಳು 59 : 1 (IRVKN)
ಹಿಂಸೆಗೊಳಗಾದ ನಿರಪರಾಧಿಯ ಪ್ರಾರ್ಥನೆ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಸೌಲನ ಕಡೆಯವರು ದಾವೀದನ ಜೀವತೆಗೆಯಬೇಕೆಂದು ಅವನ ಮನೆಯ ಸುತ್ತಲೂ ಹೊಂಚುಹಾಕುತ್ತಿದ್ದಾಗ ಅವನು ರಚಿಸಿದ ಕಾವ್ಯ. *ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು; ನನಗೆ ವಿರುದ್ಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು.
ಕೀರ್ತನೆಗಳು 59 : 2 (IRVKN)
ಕೆಡುಕರಿಂದ ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.
ಕೀರ್ತನೆಗಳು 59 : 3 (IRVKN)
ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ. ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ!
ಕೀರ್ತನೆಗಳು 59 : 4 (IRVKN)
ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಮುತ್ತಿಗೆ ಹಾಕಿ ನಿಂತಿದ್ದಾರೆ; ಎದ್ದು ಬಂದು ಪರಾಂಬರಿಸಿ ನನಗೆ ಸಹಾಯಮಾಡು.
ಕೀರ್ತನೆಗಳು 59 : 5 (IRVKN)
ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯತೋರಿಸಬೇಡ. QSS ಸೆಲಾ SE
ಕೀರ್ತನೆಗಳು 59 : 6 (IRVKN)
ಅವರು ಪ್ರತಿಸಾಯಂಕಾಲವೂ ಬಂದು ಬಂದು ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಿದ್ದಾರೆ.
ಕೀರ್ತನೆಗಳು 59 : 7 (IRVKN)
ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಹರಿತವಾದ ಕತ್ತಿಗಳಂತಿವೆ, ಅವರು, “ನಮ್ಮನ್ನು ಕೇಳುವವರು ಯಾರು?” ಅಂದುಕೊಳ್ಳುತ್ತಾರೆ.
ಕೀರ್ತನೆಗಳು 59 : 8 (IRVKN)
ಯೆಹೋವನೇ, ನೀನಾದರೋ ಅವರನ್ನು ನೋಡಿ ನಗುವಿ; ಎಲ್ಲಾ ಅನ್ಯಜನಾಂಗಗಳನ್ನು ಪರಿಹಾಸ್ಯಮಾಡುವಿ.
ಕೀರ್ತನೆಗಳು 59 : 9 (IRVKN)
ನನ್ನ ಬಲವೇ, ನಿನ್ನನ್ನು ನಿರೀಕ್ಷಿಸುತ್ತಿದ್ದೇನೆ. ನನ್ನ ಆಶ್ರಯದುರ್ಗವು ದೇವರೇ.
ಕೀರ್ತನೆಗಳು 59 : 10 (IRVKN)
ನನ್ನ ದೇವರು ತನ್ನ ಮಹಾ ಪ್ರೀತಿಯಿಂದ ನನಗೆ ಸಹಾಯಮಾಡುವನು; ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು.
ಕೀರ್ತನೆಗಳು 59 : 11 (IRVKN)
ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ. ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು.
ಕೀರ್ತನೆಗಳು 59 : 12 (IRVKN)
ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.
ಕೀರ್ತನೆಗಳು 59 : 13 (IRVKN)
ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. * ಅಥವಾ ಇಸ್ರಾಯೇಲ ದೇಶವನ್ನು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ. QSS ಸೆಲಾ SE
ಕೀರ್ತನೆಗಳು 59 : 14 (IRVKN)
ಅವರು ಪ್ರತಿಸಾಯಂಕಾಲವೂ ಬಂದು ಬಂದು, ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾ ಇದ್ದಾರೆ.
ಕೀರ್ತನೆಗಳು 59 : 15 (IRVKN)
ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ; ಹೊಟ್ಟೆಗಿಲ್ಲದಿದ್ದರೆ ಗುಣುಗುಟ್ಟುತ್ತಾರೆ† ಗುಣುಗುಟ್ಟುತ್ತಾರೆ ಅಥವಾ ರಾತ್ರಿಯೆಲ್ಲಾ ಗುಣುಗುಟ್ಟುತ್ತಾರೆ. .
ಕೀರ್ತನೆಗಳು 59 : 16 (IRVKN)
ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು.
ಕೀರ್ತನೆಗಳು 59 : 17 (IRVKN)
ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು, ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ.
❮
❯
1
2
3
4
5
6
7
8
9
10
11
12
13
14
15
16
17