ಕೀರ್ತನೆಗಳು 6 : 1 (IRVKN)
ಕಷ್ಟಪೀಡಿತನಾದ ಭಕ್ತನ ಪ್ರಾರ್ಥನೆ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದ ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನು ರಚಿಸಿದ ಕೀರ್ತನೆ. *ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.
ಕೀರ್ತನೆಗಳು 6 : 2 (IRVKN)
ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ.
ಕೀರ್ತನೆಗಳು 6 : 3 (IRVKN)
ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ?
ಕೀರ್ತನೆಗಳು 6 : 4 (IRVKN)
ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು; ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು.
ಕೀರ್ತನೆಗಳು 6 : 5 (IRVKN)
ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು?
ಕೀರ್ತನೆಗಳು 6 : 6 (IRVKN)
ನಾನು ನರಳಿ ನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ.
ಕೀರ್ತನೆಗಳು 6 : 7 (IRVKN)
ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು; ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು.
ಕೀರ್ತನೆಗಳು 6 : 8 (IRVKN)
ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.
ಕೀರ್ತನೆಗಳು 6 : 9 (IRVKN)
ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.
ಕೀರ್ತನೆಗಳು 6 : 10 (IRVKN)
ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು; ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು.

1 2 3 4 5 6 7 8 9 10