ಕೀರ್ತನೆಗಳು 60 : 1 (IRVKN)
ಅಪಜಯ ಹೊಂದಿದವರು ಜಯಕ್ಕಾಗಿ ಪ್ರಾರ್ಥಿಸುವುದು *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಷೂಷನ್ ಎದೂತೆಂಬ ರಾಗ; ದಾವೀದನು ಅರಾಮ್ ರಾಜ್ಯಗಳ ಸಂಗಡ ಯುದ್ಧ ಮಾಡುವಷ್ಟರೊಳಗೆ ಯೋವಾಬನು ಹಿಂದಿರುಗಿ ಹೋಗಿ ಉಪ್ಪಿನ ತಗ್ಗಿನಲ್ಲಿ ಹನ್ನೆರಡು ಸಾವಿರ ಎದೋಮ್ಯರನ್ನು ಹೊಡೆದಾಗ ದಾವೀದನು ರಚಿಸಿದ ಕಾವ್ಯ. ಬಾಯಿಪಾಠ ಮಾಡಿಸತಕ್ಕದ್ದು. *ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.
ಕೀರ್ತನೆಗಳು 60 : 2 (IRVKN)
ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ; ಅದು ನಡುಗುತ್ತಿರುವುದಲ್ಲಾ. ಅದರ ಒಡಕುಗಳನ್ನು ಸರಿಮಾಡು;
ಕೀರ್ತನೆಗಳು 60 : 3 (IRVKN)
ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.
ಕೀರ್ತನೆಗಳು 60 : 4 (IRVKN)
ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು, ಆದ್ದರಿಂದ ಅವರು ಬಿಲ್ಲಿನಿಂದ* ಬಿಲ್ಲಿನಿಂದ ಅಥವಾ ಸತ್ಯದ ನಿಮಿತ್ತ ಅವರು ತಪ್ಪಿಸಿಕೊಳ್ಳುತ್ತಾರೆ. ತಪ್ಪಿಸಿಕೊಳ್ಳಬಹುದು. QSS ಸೆಲಾ SE
ಕೀರ್ತನೆಗಳು 60 : 5 (IRVKN)
ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.
ಕೀರ್ತನೆಗಳು 60 : 6 (IRVKN)
ದೇವರು ತನ್ನ ಪವಿತ್ರಸ್ಥಳದಲ್ಲಿ ಪವಿತ್ರಸ್ಥಳದಲ್ಲಿ ಅಥವಾ ಪವಿತ್ರತ್ವವನ್ನು ಸಾಕ್ಷಿಯಾಗಿ. ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳೆದುಕೊಡುವೆನು.
ಕೀರ್ತನೆಗಳು 60 : 7 (IRVKN)
ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ.
ಕೀರ್ತನೆಗಳು 60 : 8 (IRVKN)
ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ. ಓ ಫಿಲಿಷ್ಟಿಯ ದೇಶವೇ ನೀನು ನನ್ನ ವಿಷಯವಾಗಿ ಜಯಘೋಷ ಮಾಡುವಿ. ಫಿಲಿಷ್ಟಿಯ ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು.
ಕೀರ್ತನೆಗಳು 60 : 9 (IRVKN)
ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?
ಕೀರ್ತನೆಗಳು 60 : 10 (IRVKN)
ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ?
ಕೀರ್ತನೆಗಳು 60 : 11 (IRVKN)
ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು; ಮನುಷ್ಯರ ಸಹಾಯವು ವ್ಯರ್ಥ.
ಕೀರ್ತನೆಗಳು 60 : 12 (IRVKN)
ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.

1 2 3 4 5 6 7 8 9 10 11 12