ಕೀರ್ತನೆಗಳು 61 : 1 (IRVKN)
ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು. [QBR]
ಕೀರ್ತನೆಗಳು 61 : 2 (IRVKN)
ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; [QBR] ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು. [QBR]
ಕೀರ್ತನೆಗಳು 61 : 3 (IRVKN)
ನೀನು ನನಗೆ ಶರಣನೂ, [QBR] ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ. [QBR]
ಕೀರ್ತನೆಗಳು 61 : 4 (IRVKN)
ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; [QBR] ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. ಸೆಲಾ
ಕೀರ್ತನೆಗಳು 61 : 5 (IRVKN)
ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; [QBR] ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ. [QBR]
ಕೀರ್ತನೆಗಳು 61 : 6 (IRVKN)
ಅರಸನು ದೀರ್ಘಕಾಲ ಬಾಳುವಂತೆ ಅನುಗ್ರಹಿಸು; [QBR] ಅವನ ಆಯಸ್ಸು ತಲತಲಾಂತರಗಳವರೆಗೆ ವೃದ್ಧಿಯಾಗಲಿ. [QBR]
ಕೀರ್ತನೆಗಳು 61 : 7 (IRVKN)
ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, [QBR] ಸದಾಕಾಲವೂ ಸಿಂಹಾಸನಾರೂಢನಾಗಿರಲಿ; [QBR] ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ. [QBR]
ಕೀರ್ತನೆಗಳು 61 : 8 (IRVKN)
ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, [QBR] ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು. [PE]

1 2 3 4 5 6 7 8

BG:

Opacity:

Color:


Size:


Font: