ಕೀರ್ತನೆಗಳು 61 : 1 (IRVKN)
ಸದ್ಭಕ್ತರು ತಮಗಾಗಿಯೂ ತಮ್ಮ ರಾಜನಿಗಾಗಿಯೂ ಮಾಡುವ ವಿಜ್ಞಾಪನೆ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. *ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು.
ಕೀರ್ತನೆಗಳು 61 : 2 (IRVKN)
ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.
ಕೀರ್ತನೆಗಳು 61 : 3 (IRVKN)
ನೀನು ನನಗೆ ಶರಣನೂ, ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ.
ಕೀರ್ತನೆಗಳು 61 : 4 (IRVKN)
ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. QSS ಸೆಲಾ SE
ಕೀರ್ತನೆಗಳು 61 : 5 (IRVKN)
ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ.
ಕೀರ್ತನೆಗಳು 61 : 6 (IRVKN)
ಅರಸನು ದೀರ್ಘಕಾಲ ಬಾಳುವಂತೆ ಅನುಗ್ರಹಿಸು; ಅವನ ಆಯಸ್ಸು ತಲತಲಾಂತರಗಳವರೆಗೆ ವೃದ್ಧಿಯಾಗಲಿ.
ಕೀರ್ತನೆಗಳು 61 : 7 (IRVKN)
ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ.
ಕೀರ್ತನೆಗಳು 61 : 8 (IRVKN)
ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.

1 2 3 4 5 6 7 8