ಕೀರ್ತನೆಗಳು 62 : 1 (IRVKN)
ದೇವರ ಆಶ್ರಯದಲ್ಲಿರುವವರ ಮನಶ್ಯಾಂತಿ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ದಾವೀದನ ಕೀರ್ತನೆ. *ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. ನನ್ನ ರಕ್ಷಣೆಯು ಆತನಿಂದಲೇ.
ಕೀರ್ತನೆಗಳು 62 : 2 (IRVKN)
ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು.
ಕೀರ್ತನೆಗಳು 62 : 3 (IRVKN)
ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ?
ಕೀರ್ತನೆಗಳು 62 : 4 (IRVKN)
ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. QSS ಸೆಲಾ SE
ಕೀರ್ತನೆಗಳು 62 : 5 (IRVKN)
ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ.
ಕೀರ್ತನೆಗಳು 62 : 6 (IRVKN)
ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ.
ಕೀರ್ತನೆಗಳು 62 : 7 (IRVKN)
ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ.
ಕೀರ್ತನೆಗಳು 62 : 8 (IRVKN)
ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. QSS ಸೆಲಾ SE
ಕೀರ್ತನೆಗಳು 62 : 9 (IRVKN)
ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.
ಕೀರ್ತನೆಗಳು 62 : 10 (IRVKN)
ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.
ಕೀರ್ತನೆಗಳು 62 : 11 (IRVKN)
ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.
ಕೀರ್ತನೆಗಳು 62 : 12 (IRVKN)
ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.
❮
❯
1
2
3
4
5
6
7
8
9
10
11
12