ಕೀರ್ತನೆಗಳು 66 : 1 (IRVKN)
ದೇವರ ಮಹತ್ಕಾರ್ಯಗಳಿಗಾಗಿ ಸ್ತುತಿಸುವುದು *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಹಾಡು; ಕೀರ್ತನೆ. *ಸರ್ವಭೂನಿವಾಸಿಗಳೇ, ದೇವರಿಗೆ ಜಯಧ್ವನಿ ಮಾಡಿರಿ.
ಕೀರ್ತನೆಗಳು 66 : 2 (IRVKN)
ಆತನ ನಾಮದ ಮಹತ್ತನ್ನು ಕೀರ್ತಿಸಿರಿ; ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ.
ಕೀರ್ತನೆಗಳು 66 : 3 (IRVKN)
ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;
ಕೀರ್ತನೆಗಳು 66 : 4 (IRVKN)
ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ, ನಿನ್ನ ನಾಮವನ್ನು ಕೀರ್ತಿಸುವರು” ಎಂದು ಹೇಳಿರಿ. QSS ಸೆಲಾ SE
ಕೀರ್ತನೆಗಳು 66 : 5 (IRVKN)
ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ.
ಕೀರ್ತನೆಗಳು 66 : 6 (IRVKN)
ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ.
ಕೀರ್ತನೆಗಳು 66 : 7 (IRVKN)
ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ. QSS ಸೆಲಾ SE
ಕೀರ್ತನೆಗಳು 66 : 8 (IRVKN)
ಜನಾಂಗಗಳೇ, ನಮ್ಮ ದೇವರನ್ನು ವಂದಿಸಿರಿ; ಆತನನ್ನು ಸ್ತುತಿಸುವ ಧ್ವನಿ ಕೇಳಿಸಲಿ.
ಕೀರ್ತನೆಗಳು 66 : 9 (IRVKN)
ಆತನು ನಮ್ಮನ್ನು ಜೀವದಿಂದುಳಿಸಿ, ನಮ್ಮ ಕಾಲುಗಳನ್ನು ಜಾರದಂತೆ ಕಾಪಾಡಿದನು.
ಕೀರ್ತನೆಗಳು 66 : 10 (IRVKN)
ದೇವರೇ, ನಮ್ಮನ್ನು ಶೋಧಿಸಿದಿ; ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ.
ಕೀರ್ತನೆಗಳು 66 : 11 (IRVKN)
ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದಿ; ನಮ್ಮ ಸೊಂಟಕ್ಕೆ ಭಾರವಾದ ಹೊರೆಯನ್ನು ಕಟ್ಟಿದಿ;
ಕೀರ್ತನೆಗಳು 66 : 12 (IRVKN)
ಮನುಷ್ಯರು ನಮ್ಮ ತಲೆಗಳ ಮೇಲೆಯೇ, ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.
ಕೀರ್ತನೆಗಳು 66 : 13 (IRVKN)
ನಾನು ನಿನ್ನ ಆಲಯಕ್ಕೆ ಬಂದು ಸರ್ವಾಂಗಹೋಮಗಳನ್ನು ಸಮರ್ಪಿಸುವೆನು.
ಕೀರ್ತನೆಗಳು 66 : 14 (IRVKN)
ಇಕ್ಕಟ್ಟಿನ ವೇಳೆಯಲ್ಲಿ ನನ್ನ ತುಟಿಗಳು ಉಚ್ಚರಿಸಿದ ಬಾಯಿಂದ ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆನು.
ಕೀರ್ತನೆಗಳು 66 : 15 (IRVKN)
ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು ಯಜ್ಞರೂಪವಾಗಿ ಸಮರ್ಪಿಸಿ, ಸುವಾಸನೆಯನ್ನು ಉಂಟುಮಾಡುವೆನು; ಯಜ್ಞಕ್ಕಾಗಿ ಹೋತ ಮತ್ತು ಹೋರಿಗಳನ್ನು ಅರ್ಪಿಸುವೆನು. QSS ಸೆಲಾ SE
ಕೀರ್ತನೆಗಳು 66 : 16 (IRVKN)
ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.
ಕೀರ್ತನೆಗಳು 66 : 17 (IRVKN)
ನನ್ನ ಮೊರೆಯೊಡನೆ ಕೃತಜ್ಞತಾಸ್ತುತಿಯೂ ನನ್ನ ನಾಲಿಗೆಯ ಮೇಲಿತ್ತು.
ಕೀರ್ತನೆಗಳು 66 : 18 (IRVKN)
ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ, ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.
ಕೀರ್ತನೆಗಳು 66 : 19 (IRVKN)
ಆದರೆ ದೇವರು ನನ್ನ ಮೊರೆಯನ್ನು ಲಕ್ಷಿಸಿ ಕೇಳಿದ್ದಾನಲ್ಲಾ.
ಕೀರ್ತನೆಗಳು 66 : 20 (IRVKN)
ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ; ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ. ದೇವರಿಗೆ ಸ್ತೋತ್ರವಾಗಲಿ.
❮
❯
1
2
3
4
5
6
7
8
9
10
11
12
13
14
15
16
17
18
19
20