ಕೀರ್ತನೆಗಳು 67 : 1 (IRVKN)
ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; [QBR] ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. ಸೆಲಾ
ಕೀರ್ತನೆಗಳು 67 : 2 (IRVKN)
ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, [QBR] ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು. [QBR]
ಕೀರ್ತನೆಗಳು 67 : 3 (IRVKN)
ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; [QBR] ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. [QBR]
ಕೀರ್ತನೆಗಳು 67 : 4 (IRVKN)
ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, [QBR] ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ [QBR] ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ
ಕೀರ್ತನೆಗಳು 67 : 5 (IRVKN)
ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; [QBR] ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. [QBR]
ಕೀರ್ತನೆಗಳು 67 : 6 (IRVKN)
ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. [QBR] ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ; [QBR]
ಕೀರ್ತನೆಗಳು 67 : 7 (IRVKN)
ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. [QBR] ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು. [PE]

1 2 3 4 5 6 7

BG:

Opacity:

Color:


Size:


Font: