ಕೀರ್ತನೆಗಳು 67 : 1 (IRVKN)
ದೇವಸ್ತುತಿ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಹಾಡು.
ಕೀರ್ತ 98 *ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. QSS ಸೆಲಾ SE
ಕೀರ್ತನೆಗಳು 67 : 2 (IRVKN)
ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.
ಕೀರ್ತನೆಗಳು 67 : 3 (IRVKN)
ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
ಕೀರ್ತನೆಗಳು 67 : 4 (IRVKN)
ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. QSS ಸೆಲಾ SE
ಕೀರ್ತನೆಗಳು 67 : 5 (IRVKN)
ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
ಕೀರ್ತನೆಗಳು 67 : 6 (IRVKN)
ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ;
ಕೀರ್ತನೆಗಳು 67 : 7 (IRVKN)
ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.
❮
❯