ಕೀರ್ತನೆಗಳು 69 : 1 (IRVKN)
ಸ್ವರಕ್ಷಣೆ ಮತ್ತು ವೈರಿಶಿಕ್ಷೆಗಾಗಿ ಭಕ್ತನ ವಿಜ್ಞಾಪನೆ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಶೋಶನ್ನೀಮೆಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ.
ಕೀರ್ತ 22; 35; 40; 45 *ದೇವರೇ, ರಕ್ಷಿಸು; ಜಲವು ನನ್ನ ಕುತ್ತಿಗೆಯವರೆಗೂ ಏರಿಬಂದಿದೆ.
ಕೀರ್ತನೆಗಳು 69 : 2 (IRVKN)
ಆಳವಾದ ಕೆಸರಿನಲ್ಲಿ ಕುಸಿಯುತ್ತಿದ್ದೇನೆ; ನೆಲೆ ಸಿಕ್ಕುತ್ತಿಲ್ಲ. ಜಲರಾಶಿಯೊಳಗೆ ಮುಳುಗುತ್ತಿದ್ದೇನೆ; ಪ್ರವಾಹವು ನನ್ನನ್ನು ಹೊಡೆದುಕೊಂಡು ಹೋಗುತ್ತಿದೆ.
ಕೀರ್ತನೆಗಳು 69 : 3 (IRVKN)
ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ.
ಕೀರ್ತನೆಗಳು 69 : 4 (IRVKN)
ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ.
ಕೀರ್ತನೆಗಳು 69 : 5 (IRVKN)
ದೇವರೇ, ನನ್ನ ಮೂರ್ಖತನವು ನಿನಗೆ ಗೊತ್ತು; ನನ್ನ ಅಪರಾಧಗಳು ನಿನಗೆ ಮರೆಯಾಗಿಲ್ಲ.
ಕೀರ್ತನೆಗಳು 69 : 6 (IRVKN)
ಸೇನಾಧೀಶ್ವರನೇ, ಯೆಹೋವನೇ, ನಿನ್ನನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ; ಇಸ್ರಾಯೇಲರ ದೇವರೇ, ನಿನ್ನ ದರ್ಶನವನ್ನು ಬಯಸುವವರು ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ.
ಕೀರ್ತನೆಗಳು 69 : 7 (IRVKN)
ನಿನಗೋಸ್ಕರವಾಗಿ ನಿಂದೆಗೆ ಒಳಗಾದೆನಲ್ಲಾ; ನಾಚಿಕೆಯು ನನ್ನ ಮುಖವನ್ನು ಕವಿದಿದೆ.
ಕೀರ್ತನೆಗಳು 69 : 8 (IRVKN)
ನನ್ನ ಅಣ್ಣತಮ್ಮಂದಿರಿಗೆ ಅಪರಿಚಿತನಂತಾದೆನು; ಒಡಹುಟ್ಟಿದವರಿಗೆ ಪರದೇಶಿಯಂತೆ ಇದ್ದೇನೆ.
ಕೀರ್ತನೆಗಳು 69 : 9 (IRVKN)
ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.
ಕೀರ್ತನೆಗಳು 69 : 10 (IRVKN)
* ಕೆಲವು ಹಸ್ತಪ್ರತಿಗಳಲ್ಲಿ ನಾನು ನನ್ನನ್ನು ಉಪವಾಸದಿಂದ ತಗ್ಗಿಸಿಕೊಂಡಿದ್ದೇನೆ ಎಂದು ಇದೆ. ನಾನು ದುಃಖದಿಂದ ಅತ್ತು ಉಪವಾಸ ಮಾಡಿ ನನ್ನ ಆತ್ಮವನ್ನು ಕುಗ್ಗಿಸಿಕೊಂಡಿದ್ದೇನೆ, ಪರಿಹಾಸ್ಯಕ್ಕೆ ಕಾರಣವಾಯಿತು.
ಕೀರ್ತನೆಗಳು 69 : 11 (IRVKN)
ನಾನು ಗೋಣಿತಟ್ಟು ಕಟ್ಟಿಕೊಂಡದ್ದು, ಅವರ ಗಾದೆಗೆ ಆಸ್ಪದವಾಯಿತು.
ಕೀರ್ತನೆಗಳು 69 : 12 (IRVKN)
ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ. ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ್ಯ ಮಾಡುತ್ತಾರೆ.
ಕೀರ್ತನೆಗಳು 69 : 13 (IRVKN)
ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯವಂತನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.
ಕೀರ್ತನೆಗಳು 69 : 14 (IRVKN)
ನಾನು ಕೆಸರಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು; ವೈರಿಗಳ ಕೈಯೊಳಗಿಂದ ಬಿಡಿಸು; ಮಹಾಜಲರಾಶಿಯಿಂದ ಎಳೆದುಕೋ.
ಕೀರ್ತನೆಗಳು 69 : 15 (IRVKN)
ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ; ಅಗಾಧವು ನನ್ನನ್ನು ಒಳಗೆ ಎಳೆದುಕೊಳ್ಳದಿರಲಿ; ಪಾತಾಳವು ನನ್ನನ್ನು ನುಂಗದಿರಲಿ.
ಕೀರ್ತನೆಗಳು 69 : 16 (IRVKN)
ಯೆಹೋವನೇ, ನನ್ನ ಮೊರೆಯನ್ನು ಲಾಲಿಸು; ನಿನ್ನ ಕೃಪೆಯು ಶುಭಕರವಾಗಿದೆಯಲ್ಲಾ. ಕರುಣಾನಿಧಿಯೇ, ನನ್ನನ್ನು ಕಟಾಕ್ಷಿಸು.
ಕೀರ್ತನೆಗಳು 69 : 17 (IRVKN)
ನಿನ್ನ ದಾಸನಿಗೆ ವಿಮುಖನಾಗಬೇಡ, ಇಕ್ಕಟ್ಟಿನಲ್ಲಿದ್ದೇನೆ, ತಡಮಾಡದೆ ಸಹಾಯಮಾಡು.
ಕೀರ್ತನೆಗಳು 69 : 18 (IRVKN)
ಸಮೀಪಿಸಿ ನನ್ನ ಪ್ರಾಣವನ್ನು ವಿಮೋಚಿಸು. ಶತ್ರು ನಿಮಿತ್ತವಾಗಿ ನನ್ನನ್ನು ರಕ್ಷಿಸು.
ಕೀರ್ತನೆಗಳು 69 : 19 (IRVKN)
ನನಗುಂಟಾದ ನಿಂದೆ, ಲಜ್ಜೆ, ಅಪಮಾನ ಇವು ನಿನಗೇ ಗೊತ್ತು; ನನ್ನ ವಿರೋಧಿಗಳು ನಿನಗೆ ಮರೆಯಾಗಿಲ್ಲವಲ್ಲಾ.
ಕೀರ್ತನೆಗಳು 69 : 20 (IRVKN)
ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.
ಕೀರ್ತನೆಗಳು 69 : 21 (IRVKN)
ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ, ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟರು.
ಕೀರ್ತನೆಗಳು 69 : 22 (IRVKN)
† ಕೆಲವು ಹಸ್ತಪ್ರತಿಗಳಲ್ಲಿ ಅವರ ಯಜ್ಞಸಮರ್ಪಿತ ಊಟವು ಅವರ ಸ್ನೇಹಿತರಿಗೆ ಉರುಲಾಗಿರಲಿ. ಅವರ ಸಂಪತ್ತು ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.
ಕೀರ್ತನೆಗಳು 69 : 23 (IRVKN)
ಅವರ ಕಣ್ಣು ಮೊಬ್ಬಾಗಿ ಕಾಣದೆ ಹೋಗಲಿ; ಅವರ ನಡುವು ಯಾವಾಗಲೂ ನಡಗುತ್ತಿರಲಿ.
ಕೀರ್ತನೆಗಳು 69 : 24 (IRVKN)
ನಿನ್ನ ರೌದ್ರವನ್ನು ಅವರ ಮೇಲೆ ಸುರಿದುಬಿಡು; ನಿನ್ನ ಕೋಪಾಗ್ನಿಯು ಅವರನ್ನು ದಹಿಸಲಿ.
ಕೀರ್ತನೆಗಳು 69 : 25 (IRVKN)
ಅವರ ಪಾಳೆಯವು ಹಾಳುಬೀಳಲಿ; ಅವರ ನಿವಾಸಗಳು ಜನಶೂನ್ಯವಾಗಲಿ.
ಕೀರ್ತನೆಗಳು 69 : 26 (IRVKN)
ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಪರಿಹಾಸ್ಯಕ್ಕೆ ಕಾರಣವಾಗಿದೆ.
ಕೀರ್ತನೆಗಳು 69 : 27 (IRVKN)
ಅವರ ಅಪರಾಧಗಳು ಒಂದೊಂದಾಗಿ ಹೆಚ್ಚುತ್ತಾ ಬರಲಿ. ನಿನ್ನ ನೀತಿಯಲ್ಲಿ ಅವರಿಗೆ ಪಾಲುಕೊಡಬೇಡ.
ಕೀರ್ತನೆಗಳು 69 : 28 (IRVKN)
ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.
ಕೀರ್ತನೆಗಳು 69 : 29 (IRVKN)
ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ, ನಿನ್ನ ರಕ್ಷಣೆಯು ಭದ್ರಸ್ಥಳದಲ್ಲಿರಿಸುವುದು.
ಕೀರ್ತನೆಗಳು 69 : 30 (IRVKN)
ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು.
ಕೀರ್ತನೆಗಳು 69 : 31 (IRVKN)
ಇದು ಯೆಹೋವನಿಗೆ ಕೊಂಬುಗೊರಸುಗಳುಳ್ಳ, ಎಳೇ ಹೋರಿಗಳ ಯಜ್ಞಕ್ಕಿಂತ ಬಹು ಪ್ರಿಯವಾದದ್ದು.
ಕೀರ್ತನೆಗಳು 69 : 32 (IRVKN)
ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ.
ಕೀರ್ತನೆಗಳು 69 : 33 (IRVKN)
ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವುದಿಲ್ಲ.
ಕೀರ್ತನೆಗಳು 69 : 34 (IRVKN)
ಭೂಮ್ಯಾಕಾಶಗಳೂ, ಸಮುದ್ರಗಳೂ, ಜಲಚರಗಳೂ ಆತನನ್ನು ಕೊಂಡಾಡಲಿ.
ಕೀರ್ತನೆಗಳು 69 : 35 (IRVKN)
ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ, ಯೆಹೂದ ದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಅದನ್ನು ಸ್ವದೇಶವನ್ನಾಗಿ ಮಾಡಿಕೊಳ್ಳುವರು.
ಕೀರ್ತನೆಗಳು 69 : 36 (IRVKN)
ಅವರ ಸಂತತಿಗೇ ಅದರ ಹಕ್ಕಿರುವುದು; ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು.
❮
❯