ಕೀರ್ತನೆಗಳು 7 : 1 (IRVKN)
ಅನ್ಯಾಯವಾದ ದೋಷಾರೋಪಣೆಗೆ ಗುರಿಯಾದ ದೇವಭಕ್ತನು ಪ್ರಾರ್ಥಿಸುವುದು ಬೆನ್ಯಾಮೀನ್ ಕುಲದವನಾದ ಕೂಷನ ಮಾತುಗಳ ವಿಷಯದಲ್ಲಿ ದಾವೀದನು ಯೆಹೋವನಿಗಾಗಿ ಹಾಡಿದ ಗೀತೆ. ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ; ಬೆನ್ನಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು.
ಕೀರ್ತನೆಗಳು 7 : 2 (IRVKN)
ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು, ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು.
ಕೀರ್ತನೆಗಳು 7 : 3 (IRVKN)
ಯೆಹೋವನೇ, ನನ್ನ ದೇವರೇ, ನಾನು ಕೈಗಳಲ್ಲಿ ಅನ್ಯಾಯವುಳ್ಳವನೂ,
ಕೀರ್ತನೆಗಳು 7 : 4 (IRVKN)
ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು, ನನ್ನನ್ನು ಹಿಡಿದು, ನೆಲಕ್ಕೆ ಕೆಡವಿ ತುಳಿಯಲಿ;
ಕೀರ್ತನೆಗಳು 7 : 5 (IRVKN)
ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; ನಿಷ್ಕಾರಣ ವೈರಿಯನ್ನು ರಕ್ಷಿಸಿದೆನಲ್ಲ. QSS ಸೆಲಾ SE
ಕೀರ್ತನೆಗಳು 7 : 6 (IRVKN)
ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.
ಕೀರ್ತನೆಗಳು 7 : 7 (IRVKN)
ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿ ನೀನು ಪುನಃ ಆರೋಹಣಮಾಡು.
ಕೀರ್ತನೆಗಳು 7 : 8 (IRVKN)
ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.
ಕೀರ್ತನೆಗಳು 7 : 9 (IRVKN)
ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.
ಕೀರ್ತನೆಗಳು 7 : 10 (IRVKN)
ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ; ಆತನು ಯಥಾರ್ಥರನ್ನು ಕಾಪಾಡುತ್ತಾನೆ.
ಕೀರ್ತನೆಗಳು 7 : 11 (IRVKN)
ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು; ಆತನು ಯಾವಾಗಲೂ ದುಷ್ಟರ ವಿಷಯದಲ್ಲಿ ಕೋಪವುಳ್ಳವನು.
ಕೀರ್ತನೆಗಳು 7 : 12 (IRVKN)
ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ.
ಕೀರ್ತನೆಗಳು 7 : 13 (IRVKN)
ಆತನು ಅದಕ್ಕೆ ಮರಣಕರವಾದ ಅಗ್ನಿಬಾಣಗಳನ್ನು ಹೂಡಿ ಅವನ ಮೇಲೆ ಪ್ರಯೋಗಿಸುವುದಕ್ಕೆ ಗುರಿಯಿಟ್ಟು ನಿಂತಿದ್ದಾನೆ.
ಕೀರ್ತನೆಗಳು 7 : 14 (IRVKN)
ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ, ಶೂನ್ಯವನ್ನೇ ಹೆತ್ತನು ನೋಡಿರಿ.
ಕೀರ್ತನೆಗಳು 7 : 15 (IRVKN)
ಅವನು ಅಗೆದು ಅಗೆದು ಗುಂಡಿಯನ್ನು ತೋಡಿ, ಅದರೊಳಗೆ ತಾನೇ ಬಿದ್ದುಹೋದನಲ್ಲಾ.
ಕೀರ್ತನೆಗಳು 7 : 16 (IRVKN)
ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು.
ಕೀರ್ತನೆಗಳು 7 : 17 (IRVKN)
ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.

1 2 3 4 5 6 7 8 9 10 11 12 13 14 15 16 17