ಕೀರ್ತನೆಗಳು 7 : 1 (IRVKN)
ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ; [QBR] ಬೆನ್ನಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು. [QBR]
ಕೀರ್ತನೆಗಳು 7 : 2 (IRVKN)
ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು, [QBR] ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು. [QBR]
ಕೀರ್ತನೆಗಳು 7 : 3 (IRVKN)
ಯೆಹೋವನೇ, ನನ್ನ ದೇವರೇ, ನಾನು ಕೈಗಳಲ್ಲಿ ಅನ್ಯಾಯವುಳ್ಳವನೂ, [QBR]
ಕೀರ್ತನೆಗಳು 7 : 4 (IRVKN)
ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು, [QBR] ನನ್ನನ್ನು ಹಿಡಿದು, ನೆಲಕ್ಕೆ ಕೆಡವಿ ತುಳಿಯಲಿ; [QBR]
ಕೀರ್ತನೆಗಳು 7 : 5 (IRVKN)
ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; [QBR] ನಿಷ್ಕಾರಣ ವೈರಿಯನ್ನು ರಕ್ಷಿಸಿದೆನಲ್ಲ. ಸೆಲಾ
ಕೀರ್ತನೆಗಳು 7 : 6 (IRVKN)
ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. [QBR] ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು. [QBR]
ಕೀರ್ತನೆಗಳು 7 : 7 (IRVKN)
ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿ [QBR] ನೀನು ಪುನಃ ಆರೋಹಣಮಾಡು. [QBR]
ಕೀರ್ತನೆಗಳು 7 : 8 (IRVKN)
ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. [QBR] ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು. [QBR]
ಕೀರ್ತನೆಗಳು 7 : 9 (IRVKN)
ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ [QBR] ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, [QBR] ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; [QBR] ನೀತಿವಂತರನ್ನು ದೃಢಪಡಿಸು. [QBR]
ಕೀರ್ತನೆಗಳು 7 : 10 (IRVKN)
ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ; [QBR] ಆತನು ಯಥಾರ್ಥರನ್ನು ಕಾಪಾಡುತ್ತಾನೆ. [QBR]
ಕೀರ್ತನೆಗಳು 7 : 11 (IRVKN)
ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು; [QBR] ಆತನು ಯಾವಾಗಲೂ ದುಷ್ಟರ ವಿಷಯದಲ್ಲಿ ಕೋಪವುಳ್ಳವನು. [QBR]
ಕೀರ್ತನೆಗಳು 7 : 12 (IRVKN)
ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ [QBR] ಆತನು ತನ್ನ ಕತ್ತಿಯನ್ನು ಮಸೆಯುವನು. [QBR] ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ. [QBR]
ಕೀರ್ತನೆಗಳು 7 : 13 (IRVKN)
ಆತನು ಅದಕ್ಕೆ ಮರಣಕರವಾದ ಅಗ್ನಿಬಾಣಗಳನ್ನು ಹೂಡಿ [QBR] ಅವನ ಮೇಲೆ ಪ್ರಯೋಗಿಸುವುದಕ್ಕೆ ಗುರಿಯಿಟ್ಟು ನಿಂತಿದ್ದಾನೆ. [QBR]
ಕೀರ್ತನೆಗಳು 7 : 14 (IRVKN)
ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ; [QBR] ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ, [QBR] ಶೂನ್ಯವನ್ನೇ ಹೆತ್ತನು ನೋಡಿರಿ. [QBR]
ಕೀರ್ತನೆಗಳು 7 : 15 (IRVKN)
ಅವನು ಅಗೆದು ಅಗೆದು ಗುಂಡಿಯನ್ನು ತೋಡಿ, [QBR] ಅದರೊಳಗೆ ತಾನೇ ಬಿದ್ದುಹೋದನಲ್ಲಾ. [QBR]
ಕೀರ್ತನೆಗಳು 7 : 16 (IRVKN)
ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; [QBR] ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು. [QBR]
ಕೀರ್ತನೆಗಳು 7 : 17 (IRVKN)
ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, [QBR] ನಾನು ಆತನನ್ನು ಕೊಂಡಾಡುವೆನು. [QBR] ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು. [PE]

1 2 3 4 5 6 7 8 9 10 11 12 13 14 15 16 17

BG:

Opacity:

Color:


Size:


Font: