ಕೀರ್ತನೆಗಳು 70 : 1 (IRVKN)
ಸಂರಕ್ಷಣೆಗಾಗಿ ಪ್ರಾರ್ಥನೆ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು.
ಕೀರ್ತ 40:13-17 *ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು. ಯೆಹೋವನೇ, ಬೇಗನೆ ಬಂದು ಸಹಾಯ ಮಾಡು.
ಕೀರ್ತನೆಗಳು 70 : 2 (IRVKN)
ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.
ಕೀರ್ತನೆಗಳು 70 : 3 (IRVKN)
ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ.
ಕೀರ್ತನೆಗಳು 70 : 4 (IRVKN)
ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ.
ಕೀರ್ತನೆಗಳು 70 : 5 (IRVKN)
ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ದೇವರೇ, ಬೇಗನೆ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.
❮
❯